ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಏರಿಕೆಯ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 8,582 ಹೊಸ ಕೇಸ್ ಪತ್ತೆ, 44 ಸಾವಿರಕ್ಕೆ ಸಕ್ರಿಯ ಪ್ರಕರಣ

4ನೇ ಅಲೆ ಭೀತಿಯ ನಡುವೆ ದೇಶದಲ್ಲಿ ಕೋವಿಡ್ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಭಾನುವಾರ ಮುಂಜಾಬನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,582 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 04 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: 4ನೇ ಅಲೆ ಭೀತಿಯ ನಡುವೆ ದೇಶದಲ್ಲಿ ಕೋವಿಡ್ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಭಾನುವಾರ ಮುಂಜಾಬನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,582 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 04 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,22,017ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,761ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 4,435 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,52,743ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,44,994 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,45,43,282 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,07,08,541 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!