ಭದ್ರತಾ ಪಡೆಗಳ ಚಿತ್ರ 
ದೇಶ

ಕಾಶ್ಮೀರದಲ್ಲಿ ಈ ವರ್ಷ ಭದ್ರತಾ ಪಡೆಗಳಿಂದ 100 ಉಗ್ರರು ಹತ್ಯೆ

ಈ ವರ್ಷದ ಆರಂಭದಿಂದ ಇಲ್ಲಿಯವರೆಗೂ ಕಾಶ್ಮೀರದಲ್ಲಿ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶ್ರೀನಗರ:  ಈ ವರ್ಷದ ಆರಂಭದಿಂದ ಇಲ್ಲಿಯವರೆಗೂ ಕಾಶ್ಮೀರದಲ್ಲಿ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಹತ್ಯೆಗೀಡಾದ 100 ಉಗ್ರರ ಪೈಕಿ ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.  63 ಎಲ್ ಇಟಿ ಉಗ್ರರು ಹತ್ಯೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಶ್ಮೀರದಲ್ಲಿ ಈ ವರ್ಷ ಆರಂಭವಾದಾಗಿನಿಂದಲೂ 29 ವಿದೇಶಿಗರು ಸೇರಿದಂತೆ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ. ಇದು ಕಳೆದ ವರ್ಷ ಹತ್ಯೆಗೀಡಾದ ಉಗ್ರರಿಗಿಂತ ದುಪ್ಪಟ್ಟಾಗಿದೆ. ಕಳೆದ ವರ್ಷ ಓರ್ವ ವಿದೇಶಿ ಸೇರಿದಂತೆ ಐವತ್ತು ಉಗ್ರರನ್ನು ಹತ್ಯೆ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಹತ್ಯೆಗೀಡಾದ ಉಗ್ರರಲ್ಲಿ 63 ಮಂದಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ್ದರೆ, ಉಳಿದವರು ಜೈಶ್ -ಇ-ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!