ಪಿ ಚಿದಂಬರಂ 
ದೇಶ

ಚಿದಂಬರಂ ಪಕ್ಕೆಲುಬು ಮುರಿತ: ಪೊಲೀಸರ ಥಳಿತದಿಂದ ಉಂಟಾದ ಗಾಯವೆಂದು ಕಾಂಗ್ರೆಸ್ ಆರೋಪ

ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಪಿ ಚಿದಂಬರಂ ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ.

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಪಿ ಚಿದಂಬರಂ ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ತನಿಖೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ರಾಹುಲ್ ಬೆಂಬಲಕ್ಕೆ ಕಾಂಗ್ರೆಸ್ ದೆಹಲಿಯ ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸಿತ್ತು.

ಅದರಲ್ಲಿ ಪಿ. ಚಿದಂಬರಂ ಕೂಡ ಸೇರಿಕೊಂಡರು. ಪ್ರತಿಭಟನೆಯ ವೇಳೆ ಪೊಲೀಸರು ತಳ್ಳಿದ್ದರಿಂದ ಚಿದಂಬರಂ ಅವರಿಗೆ ಗಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮೋದಿ ಸರಕಾರ ಅನಾಗರಿಕತೆಯ ಎಲ್ಲ ಮಿತಿಗಳನ್ನು ದಾಟಿದೆ. ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಪೊಲೀಸರು ಹೊಡೆದಿದ್ದಾರೆ. ಕನ್ನಡಕವನ್ನು ನೆಲಕ್ಕೆ ಎಸೆದಿದ್ದಾರೆ. ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ ಎಂದು ಆರೋಪಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!