ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: ದೇಶದಲ್ಲಿಂದು 8,084 ಹೊಸ ಕೇಸ್ ಪತ್ತೆ, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,084 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,084 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,30,101ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,771ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,995ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 4,592 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,57,335ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,16,179 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,48,59,461 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,19,81,150 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ