ದೇಶ

ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತಿನಿಂದ ದೂರವಿರಿ: ಮಾಧ್ಯಮಗಳಿಗೆ ಕೇಂದ್ರ ಸೂಚನೆ

Lingaraj Badiger

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತುಗಳಿಂದ ದೂರವಿರುವಂತೆ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ಸೂಚನೆ ನೀಡಿದೆ.

ದೇಶದ "ಹೆಚ್ಚಿನ ಭಾಗಗಳಲ್ಲಿ" ಬೆಟ್ಟಿಂಗ್ ಮತ್ತು ಜೂಜಾಟವು ಕಾನೂನುಬಾಹಿರವಾಗಿದೆ.  ಆನ್‌ಲೈನ್ ಬೆಟ್ಟಿಂಗ್ ಗಮನಾರ್ಹ ಆರ್ಥಿಕ ಮತ್ತು ಸಾಮಾಜಿಕ-ಆರ್ಥಿಕ ಅಪಾಯವನ್ನುಂಟುಮಾಡುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಸಾರ್ವಜನಿಕ ಹಿತಾಸಕ್ತಿಯಿಂದ ಈ ಸಲಹೆಯನ್ನು ನೀಡಲಾಗಿದೆ. ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್‌ಗಳು/ಪ್ಲಾಟ್‌ಫಾರ್ಮ್‌ಗಳ ಹಲವಾರು ಜಾಹೀರಾತುಗಳು ಮುದ್ರಣ, ಎಲೆಕ್ಟ್ರಾನಿಕ್, ಸಾಮಾಜಿಕ ಮತ್ತು ಆನ್‌ಲೈನ್ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದರಿಂದ ದೂರವಿರುವಂತೆ ಎಂದು ಸಚಿವಾಲಯ ಹೇಳಿದೆ.

ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತು ಪ್ರಕಟಿಸುವುದನ್ನು ತಡೆಯಲು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಕೇಂದ್ರ ಸೂಚನೆ ನೀಡಿದೆ.

SCROLL FOR NEXT