ಸಾಂದರ್ಭಿಕ ಚಿತ್ರ 
ದೇಶ

ಅಕ್ರಮ ಸಂಬಂಧ ಹೊಂದಿದ್ದ ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ; ಪತ್ನಿ ಸೇರಿ ನಾಲ್ವರ ಬಂಧನ

ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾಯಪುರ: ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜೂನ್ 11 ರಂದು ಊರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ತನಿಖೆಗಾಗಿ ಪೊಲೀಸ್ ತಂಡವನ್ನು ಗ್ರಾಮಕ್ಕೆ ಕಳುಹಿಸಲಾಗಿತ್ತು. ತನ್ನ ಪತಿ ಮತ್ತೊಬ್ಬ ಮಹಿಳೆಯ ಜೊತೆ ಇದ್ದುದ್ದನ್ನು ಕಂಡ ಪತ್ನಿ, ತನ್ನ ಸಂಬಂಧಿಕರನ್ನ ಕರೆದು ಬಳಿಕ ಮಹಿಳೆ ಹಾಗೂ ಪತಿ ಇಬ್ಬರನ್ನೂ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ, ಉರಿಂದಬೇಡ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354 ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಹೆಂಡತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT