ರಾಹುಲ್ ಗಾಂಧಿ 
ದೇಶ

'ಸುಳ್ಳು ಪಾಪಕ್ಕೆ ಸಮ': ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ರಾಹುಲ್ ಗಾಂಧಿ ಟ್ವೀಟ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಇಂದು ಮಂಗಳವಾರ ಕೂಡ ಜಾರಿ ನಿರ್ದೇಶನಾಲಯದಿಂದ ಮುಂದುವರಿಯಲಿದೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಇಂದು ಮಂಗಳವಾರ ಕೂಡ ಜಾರಿ ನಿರ್ದೇಶನಾಲಯದಿಂದ ಮುಂದುವರಿಯಲಿದೆ.

ಇನ್ನು ಕೆಲವೇ ಹೊತ್ತಿನಲ್ಲಿ ಅವರು ದೆಹಲಿಯ ಇಡಿ ಕಚೇರಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದು ಅದಕ್ಕೂ ಮುನ್ನ ದೆಹಲಿಯ ತುಘಲಕ್ ಲೇನ್ ರಸ್ತೆಯಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಿ ಸೋದರನ ಜೊತೆ ಚರ್ಚೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಕಬೀರ್ ದಾಸ್ ಜಯಂತಿ ಪ್ರಯುಕ್ತ  ಅವರ ದ್ವಿಪದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಸುಳ್ಳು ಪಾಪಕ್ಕೆ ಸಮ, ಸತ್ಯ ತಪಸ್ಸಿಗೆ ಸಮ, ಹೃದಯಕ್ಕೆ ಸರಿಯಾದ ಸತ್ಯ ಹೇಳಿದರೆ ಮನಸ್ಸು, ಹೃದಯ ನಿಮ್ಮದಾಗುತ್ತದೆ. ಸಮಾಜಕ್ಕೆ ಸಮಾನತೆ, ಸೇವೆ, ಪರಸ್ಪರ ಸೌಹಾರ್ದತೆ ಮತ್ತು ಪ್ರೀತಿಯ ಪಾಠವನ್ನು ಕಲಿಸಿದ ಸಂತ ಕಬೀರ್ ದಾಸ್ ಜೀ ಅವರ ಜನ್ಮದಿನದಂದು ಅವರಿಗೆ ನಮನಗಳು ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!