ಸಚಿನ್ ಪೈಲಟ್ 
ದೇಶ

ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಸಚಿನ್ ಪೈಲಟ್ ವಶಕ್ಕೆ ಪಡೆದ ದೆಹಲಿ ಪೊಲೀಸರು

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದತೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದ್ದು,...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದತೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದ್ದು, ದೆಹಲಿ ಪೊಲೀಸರು ಪ್ರತಿಭಟನಾನಿರತ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಬುಧವಾರ ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಇಂದು ಸತತ ಮೂರನೇ ದಿನವೂ ವಿಚಾರಣೆಗೆ ಒಳಪಡಿಸಿದೆ.

ರಾಜಸ್ಥಾನದ ಕಾಂಗ್ರೆಸ್ ಶಾಸಕ ಮುಖೇಶ್ ಭಾಕರ್ ಅವರು ಸಚಿನ್ ಪೈಲಟ್ ಬಂಧನದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ವಿಡಿಯೋದಲ್ಲಿ ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿಗರು ಪೊಲೀಸರೊಂದಿಗೆ ವಾದಿಸುತ್ತಿರುವುದನ್ನು ಕಾಣಬಹುದು.

ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಪ್ರಧಾನ ಕಚೇರಿ ಮತ್ತು ಇಡಿ ಕಚೇರಿಯ ಹೊರಗೆ ಬಂಧಿಸಲಾಯಿತು, ರಾಹುಲ್ ಗಾಂಧಿಯನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಿ, ಘೋಷಣೆಗಳನ್ನು ಕೂಗಿದರು. ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಎಳೆದೊಯ್ದು ಬಂಧನಕ್ಕೊಳಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT