ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಭಾರೀ ಏರಿಕೆ: ದೇಶದಲ್ಲಿಂದು 12,213 ಹೊಸ ಕೇಸ್ ಪತ್ತೆ, 11 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,57,730ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,803ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 58,215ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 7,624 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  4,26,7,471ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,40,278 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,58,71,030 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,67,37,014 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ