ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಾಯಿ ಸೋನಿಯಾ ಗಾಂಧಿಗೆ ಅನಾರೋಗ್ಯ; ಇಡಿ ವಿಚಾರಣೆ ಮುಂದೂಡುವಂತೆ ರಾಹುಲ್ ಗಾಂಧಿ ಮನವಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಆದರೆ ಈ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

ರಾಹುಲ್ ಗಾಂಧಿ
Lingaraj Badiger
Updated On : 16 Jun 2022, 7:54 pm

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಆದರೆ ಈ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಬೇಕೆಂದು ರಾಹುಲ್ ಮನವಿ ಮಾಡಿಕೊಂಡಿದ್ದು, ಈ ಬೇಡಿಕೆಗೆ ಜಾರಿ ನಿರ್ದೇಶನಾಲಯ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ.

ಇದನ್ನು ಓದಿ: ನಿರುದ್ಯೋಗಿಗಳ ಅಗ್ನಿಪರೀಕ್ಷೆ ಬೇಡ: ಪ್ರಧಾನಿಗೆ ರಾಹುಲ್ ಒತ್ತಾಯ

Advertisement

Advertisement

ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು, ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಕಾರಣ ನೀಡಿ, ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಓದಿ: ಜೂನ್ 17ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್; ದೆಹಲಿ ಪೊಲೀಸರದ್ದು ಗೂಂಡಾಗಿರಿ ಎಂದ ಕಾಂಗ್ರೆಸ್!

ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಸೋಮವಾರದವರೆಗೆ ಕಾಲಾವಕಾಶ ಕೋರಿದ್ದಾರೆ. ರಾಹುಲ್ ಗಾಂಧಿ ಅವರನ್ನು ಇಡಿ ಸತತ ಮೂರು ದಿನವೂ ಪ್ರಶ್ನಿಸಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸತತ ಮೂರು ದಿನಗಳ ಕಾಲ ಸುಮಾರು 27 ಗಂಟೆ ವಿಚಾರಣೆ ಎದುರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement