ತಾಯಿ ಹೀರಾಬೆನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ 
ದೇಶ

ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ತಾಯಿ ಹೀರಾಬೆನ್: ಗಾಂಧಿನಗರ ರಸ್ತೆಯೊಂದಕ್ಕೆ ಹೆಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಇದೇ ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ಶತಾಯುಷಿ ಎನಿಸಿಕೊಳ್ಳಲಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ರಸ್ತೆಯೊಂದಕ್ಕೆ ಹೀರಾಬೆನ್ ಹೆಸರನ್ನಿಡಲಾಗಿದೆ.

ಅಹಮದಾಬಾದ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಇದೇ ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ಶತಾಯುಷಿ ಎನಿಸಿಕೊಳ್ಳಲಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ರಸ್ತೆಯೊಂದಕ್ಕೆ ಹೀರಾಬೆನ್ ಹೆಸರನ್ನಿಡಲಾಗಿದೆ.

ಹೀರಾಬೆನ್ ತನ್ನ 100 ನೇ ವರ್ಷಕ್ಕೆ ಕಾಲಿಡುತ್ತಿರುವಾಗ, ನಾವು ಮುಂದಿನ ಪೀಳಿಗೆಗೆ ಅವರ ಜೀವನದಿಂದ ಸ್ಫೂರ್ತಿ ಪಡೆಯಲು ರೈಸನ್ ಪ್ರದೇಶದ 80 ಮೀಟರ್ ರಸ್ತೆಗೆ ಹೀರಾ ಮಾರ್ಗ ಎಂದು ಹೆಸರಿಸಲು ನಿರ್ಧರಿಸಿದ್ದೇವೆ ಎಂದು ಗಾಂಧಿನಗರ ಮೇಯರ್ ಹಿತೇಶ್ ಮಕ್ವಾನಾ ತಿಳಿಸಿದ್ದಾರೆ.

ಹೀರಾಬೆನ್ ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಈ ಪ್ರದೇಶವು ಬಿಜೆಪಿ ಆಡಳಿತವಿರುವ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಗೆ ಬರುತ್ತದೆ.

ಹೀರಾಬೆನ್ ಅವರು ಜೂನ್ 18, 1923ರಂದು ಜನಿಸಿದರು. ನಾಡಿದ್ದು ಜೂನ್ 18 ರಂದು ಗುಜರಾತ್‌ನಲ್ಲಿರುವ ಪ್ರಧಾನಿ ಮೋದಿ ಅವರು ತಮ್ಮ ತಾಯಿಯನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೋದಿ ಅವರು ಜೂನ್ 18 ರಂದು ಗುಜರಾತ್‌ಗೆ ಒಂದು ದಿನದ ಭೇಟಿ ನೀಡಲಿದ್ದು, ಅವರು ಪಾವಗಡ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ, ನಂತರ ವಡೋದರಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಅಹಮದಾಬಾದ್‌ನ ಜಗನ್ನಾಥ ದೇವಸ್ಥಾನದಲ್ಲಿ ಮೋದಿ ಕುಟುಂಬವು 'ಭಂಡಾರೋಟ (ಸಮುದಾಯ ಭೋಜನ) ಆಯೋಜಿಸಿದೆ.

ವಡ್ನಗರ್‌ನಲ್ಲಿರುವ ಹಟಕೇಶ್ವರ ಮಹಾದೇವ ದೇವಸ್ಥಾನವು ಪ್ರಧಾನಿಯವರ ತಾಯಿಯ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ಕೊನೆಯ ಬಾರಿಗೆ ತಮ್ಮ ತಾಯಿಯನ್ನು ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್