ವಿ ಆರ್ ಚೌಧರಿ 
ದೇಶ

ಪ್ರತಿಭಟನಾನಿರತ ಯುವಕರು ಮುಂದೆ ಬೆಲೆ ತೆರಬೇಕಾಗಬಹುದು: ಏರ್ ಚೀಫ್ ಮಾರ್ಷಲ್ ಎಚ್ಚರಿಕೆ

ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಯುವಕರು ಬೀದಿಗಿಳಿದಿದ್ದು, ಈಗ ಪ್ರತಿಭಟನೆಯಲ್ಲಿ ಭಾಗಿಯಾದ ಯುವಕರು ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗಬಹುದು ಎಂದು ಧರಣಿಯಲ್ಲಿ ಭಾಗವಹಿಸಿದ ಉದ್ಯೋಗ...

ಮುಂಬೈ: ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಯುವಕರು ಬೀದಿಗಿಳಿದಿದ್ದು, ಈಗ ಪ್ರತಿಭಟನೆಯಲ್ಲಿ ಭಾಗಿಯಾದ ಯುವಕರು ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗಬಹುದು ಎಂದು ಧರಣಿಯಲ್ಲಿ ಭಾಗವಹಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಈ ರೀತಿಯ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಇದು ಸಮಸ್ಯೆಗೆ ಪರಿಹಾರವಲ್ಲ. ನೇಮಕಾತಿಯಲ್ಲಿ ಕೊನೆಯ ಹಂತವೆಂದರೆ ಪೊಲೀಸ್ ಪರಿಶೀಲನೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರು ಪೊಲೀಸರಿಂದ ಕ್ಲಿಯರೆನ್ಸ್ ಪಡೆಯುವುದಿಲ್ಲ ಎಂದು ವಾಯುಪಡೆಯ ಮುಖ್ಯಸ್ಥ(ಸಿಎಎಸ್) ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ.

ಪ್ರತಿಭಟನಾಕಾರರು ಈಗ ಮಾಡಬೇಕಾಗಿರುವುದೇನೆಂದರೆ ಯೋಜನೆ ಕುರಿತಾಗಿ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವುದು, ಯೋಜನೆಯನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವುದು. ಇದರಿಂದ ಯೋಜನೆಯ ಪ್ರಯೋಜನೆ ಅವರಿಗೆ ತಿಳಿಯಲಿದೆ. ಇದು ಅವರ ಮನಸ್ಸಿನಲ್ಲಿರುವ ಎಲ್ಲಾ ಅನುಮಾನಗಳನ್ನು ನಿವಾರಿಸುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ಸೇನೆಗೆ ಈ ವರ್ಷ 17 ರಿಂದ 23 ವರ್ಷದೊಳಗಿನ 46,000 ಯುವಕರನ್ನು ನೇಮಿಸಿಕೊಳ್ಳಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ವಾಯುಪಡೆ ಸೇರಿದಂತೆ ಮೂರು ಸೇನಾಪಡೆಗಳ ಮುಖ್ಯಸ್ಥರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಸಹ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT