ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ದೇಶದಲ್ಲಿಂದು 13,216 ಹೊಸ ಕೇಸ್ ಪತ್ತೆ, 23 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 13,216 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 13,216 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,83,793ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ  5,24,840ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 68,108ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 8,148 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ   4,26,90,845ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,84,924 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,73,95,276 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,96,00,42,768 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel