ದೇಶ

ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಪ್ರಸ್ತಾಪ ತಿರಸ್ಕರಿಸಿದ ಫಾರೂಕ್ ಅಬ್ದುಲ್ಲಾ

Lingaraj Badiger

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪವನ್ನು ಶನಿವಾರ ತಿರಸ್ಕರಿಸಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಉನ್ನತ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಸಹ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಶಿವಸೇನೆ ಸೇರಿದಂತೆ 17 ಪ್ರತಿಪಕ್ಷಗಳ ಪ್ರತಿನಿಧಿಗಳು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಶರದ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಆದರೆ ಪವಾರ್ ಅವರು ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪ ತಿರಸ್ಕರಿಸಿದ್ದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅವರು ಜಂಟಿ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಪ್ರಸ್ತಾಪಿಸಿದ್ದರು. ಆದರೆ ನಾನು ಈ ಸ್ಥಾನದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ ಎಂದು ಫಾರೂಕ್ ಅಬ್ದುಲ್ಲಾ ಅವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರವನ್ನು ಮುನ್ನಡೆಸಲು ನನ್ನ ಪ್ರಯತ್ನಗಳು ಬೇಕಾಗಿವೆ. ನನ್ನ ಮುಂದೆ ಸಕ್ರಿಯ ರಾಜಕೀಯ ಪ್ರಪಂಚವಿದೆ. ಈ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತೇನೆ. ಆದ್ದರಿಂದ ನಾನು ಗೌರವಯುತವಾಗಿ ನನ್ನ ಹೆಸರನ್ನು ಪರಿಗಣನೆಯಿಂದ ಹಿಂಪಡೆಯಲು ಬಯಸುತ್ತೇನೆ ಮತ್ತು ನಾನು ಜಂಟಿ ವಿರೋಧ ಪಕ್ಷದ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲು ಎದುರು ನೋಡುತ್ತಿದ್ದೇನೆ ಎಂದು ಫಾರೂಕ್ ಅಬ್ದುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SCROLL FOR NEXT