ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಹೀರಾಬೆನ್'ಗೆ ನೂರರ ಸಂಭ್ರಮ: ಅಮ್ಮನ ಹುಟ್ಟುಹಬ್ಬದಂದು ತಾಯಿ ಭೇಟಿಯಾಗಿ ಆಶೀರ್ವಾದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.

ತಾಯಿಯ ಪಾದಪೂಜೆ ಮಾಡುತ್ತಿರುವ ಪ್ರಧಾನಿ ಮೋದಿ.
Manjula VN
Updated On : 18 Jun 2022, 1:50 pm

ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.

ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

PHOTOS: ಹೀರಾಬೆನ್ 100ನೇ ವರ್ಷದ ಹುಟ್ಟುಹಬ್ಬ: ನನ್ನ ತಾಯಿ ಎಷ್ಟು ಅಸಾಧಾರಣಳೋ ಅಷ್ಟೇ ಸರಳ- ನರೇಂದ್ರ ಮೋದಿ

Advertisement

Advertisement

ಇದನ್ನೂ ಓದಿ: ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ತಾಯಿ ಹೀರಾಬೆನ್: ಗಾಂಧಿನಗರ ರಸ್ತೆಯೊಂದಕ್ಕೆ ಹೆಸರು

ಅಷ್ಟೇ ಅಲ್ಲದೆ, ಅಮ್ಮನ ಜನ್ಮದಿನಕ್ಕೆ ಮೋದಿ ಉಡುಗೊರೆ ಕೂಡ ನೀಡಿದ್ದಾರೆಂದು ತಿಳಿದುಬಂದಿದೆ. ಜೊತೆಗೆ ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement