ಸಾಂದರ್ಭಿಕ ಚಿತ್ರ 
ದೇಶ

ಕುಪ್ವಾರ ಎನ್ ಕೌಂಟರ್: ಇಬ್ಬರು ಉಗ್ರರು ಹತ, ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಭಾನುವಾರ ಹತರಾಗಿದ್ದಾರೆ, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಭಾನುವಾರ ಹತರಾಗಿದ್ದಾರೆ, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಪ್ವಾರಾ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬಾತ ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಿಯಾಗಿದ್ದರೆ, ಎರಡನೆಯವನ ಗುರುತು ಪತ್ತೆಹಚ್ಚಲಾಗುತ್ತಿದೆ ಎಂದು ಕೂಡ ಪೊಲೀಸರು ಹೇಳಿದ್ದಾರೆ.

ಬಂಧಿತ ಭಯೋತ್ಪಾದಕ ಶೋಕೆಟ್ ಅಹ್ಮದ್ ಶೇಖ್‌ನ ಮಾರ್ಗದರ್ಶನದಲ್ಲಿ ಉತ್ತರ ಕಾಶ್ಮೀರದ ಲೋಲಾಬ್ ಪ್ರದೇಶದಲ್ಲಿ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಕುಪ್ವಾರದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅಡಗುತಾಣಗಳ ಹುಡುಕಾಟದ ಸಮಯದಲ್ಲಿ, ಅಡಗಿಕೊಂಡಿದ್ದ ಭಯೋತ್ಪಾದಕರು ಪ್ರತಿದಾಳಿ ನಡೆಸಿ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದರು, ಇದರಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. 

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ದಮ್ಹಾಲ್ ಹಂಜಿ ಪೋರಾ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಎರಡೂ ಕಡೆಯಿಂದ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT