ರಾಮಮಂದಿರದ ವಿನ್ಯಾಸ 
ದೇಶ

ರಾಮಮಂದಿರ ನಿರ್ಮಾಣ: 22 ಕೋಟಿ ರೂ ಮೌಲ್ಯದ ಚೆಕ್‌ಗಳು ಬೌನ್ಸ್‌, ದೇಣಿಗೆ ಮೊತ್ತ 5,400 ಕೋಟಿ ರೂ. ಗೆ ಏರಿಕೆ!

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದ 22 ಕೋಟಿ ರೂ ಮೌಲ್ಯದ ಚೆಕ್‌ಗಳು ಬೌನ್ಸ್ ಅಗಿವೆ ಎಂದು ತಿಳಿದುಬಂದಿದೆ.

ಲಖನೌ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದ 22 ಕೋಟಿ ರೂ ಮೌಲ್ಯದ ಚೆಕ್‌ಗಳು ಬೌನ್ಸ್ ಅಗಿವೆ ಎಂದು ತಿಳಿದುಬಂದಿದೆ.

ರಾಮಮಂದಿರ ನಿರ್ಮಾಣ ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದ 22 ಕೋಟಿ ರೂ ಮೌಲ್ಯದ ಚೆಕ್‌ಗಳು ಬೌನ್ಸ್ ಅಗಿವೆ ಎಂದು ಮಾಹಿತಿ ನೀಡಿದೆ. ಅಂತೆಯೇ ಟ್ರಸ್ಟ್ ಗೆ ಈ ವರೆಗೂ ದೇಣಿಗೆ ರೂಪದಲ್ಲಿ 5,400 ಕೋಟಿ ರೂ.ಗೂ ಅಧಿಕ ಹಣ ಹರಿದುಬಂದಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಟ್ರಸ್ಟ್‌ನ ಪದಾಧಿಕಾರಿಯೊಬ್ಬರು, 'ಕಳೆದ ವರ್ಷ ಜನವರಿ ಮತ್ತು ಮಾರ್ಚ್ ನಡುವೆ ಆರಂಭವಾದ ಮೂರು ತಿಂಗಳ ದೇಣಿಗೆಯ ಅಭಿಯಾನದಲ್ಲಿಯೇ 3,500 ಕೋಟಿ ರೂ ಮೊತ್ತದ ದೇಣಿಗೆಯನ್ನು ಸ್ವೀಕರಿಸಲಾಗಿದೆ. ಸುಮಾರು 1,500 ಚೆಕ್‌ಗಳು ತಾಂತ್ರಿಕ ಕಾರಣಗಳಿಂದಾಗಿ ಬೌನ್ಸ್ ಆಗಿವೆ. ಈ ಚೆಕ್‌ಗಳನ್ನು ನೀಡಿದ್ದವರಲ್ಲಿ ಬಹುತೇಕರು ನಮ್ಮನ್ನು ಸಂಪರ್ಕಿಸಿದ್ದು, ಹೊಸದಾಗಿ ದೇಣಿಗೆ ನೀಡುವುದಾಗಿ ಹೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್‌ನ ಪದಾಧಿಕಾರಿಗಳ ಪ್ರಕಾರ, 2024ರ ಜನವರಿ 24ರಂದು ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುವುದು. ಮಂದಿರದ ಸಂಪೂರ್ಣ ಸಂಕೀರ್ಣವನ್ನು 2025ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೇ ತಿಂಗಳ ಆರಂಭದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಗೂ ಮುನ್ನವೇ ರಾಮ ಮಂದಿರ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಬಯಸಿವೆ. 2020ರ ಆಗಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ