ಸಿಧು ಮೂಸೆವಾಲಾ 
ದೇಶ

ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಶೂಟರ್ ಗಳ ಬಂಧನ

ಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್‌ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಚಂಡೀಗಡ: ಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್‌ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಇದೇ ವೇಳೆ ಇಬ್ಬರು ಆರೋಪಿಗಳಿಂದ ಪೊಲೀಸರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಹರಿಯಾಣ ಮೂಲದ ದರೋಡೆಕೋರ ಪ್ರಿಯವ್ರತ್ ಅಲಿಯಾಸ್ ಫೌಜಿ(26) ಹಾಗೂ ಮತ್ತೊಬ್ಬ ಆರೋಪಿ ಕಾಶಿಶ್ ಅಲಿಯಾಸ್ ಕುಲದೀಪ್ (24) ಎಂದು ಗುರುತಿಸಲಾಗಿದೆ.

ರಾಮಕರನ್ ಗ್ಯಾಂಗ್ ನ ಸದಸ್ಯನಾಗಿದ್ದ ಈತ ಶಾರ್ಪ್ ಶೂಟರ್ ಆಗಿ ಕೆಲಸ ಮಾಡುತ್ತಿದ್ದ. ಶಾರ್ಪ್ ಶೂಟರ್‌ಗಳನ್ನು ಗುಜರಾತ್‌ನ ಮುಂದ್ರಾದಲ್ಲಿ ಬಂಧಿಸಲಾಗಿದೆ. ಇದಕ್ಕೂ ಮುನ್ನ ಪಂಜಾಬ್ ಪೊಲೀಸರು ಮೇ 29 ರಂದು ನಡೆದ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಎಂಟು ಶಾರ್ಪ್ ಶೂಟರ್ ಗಳನ್ನು ಗುರುತಿಸಿದ್ದರು.

ಕಳೆದ ತಿಂಗಳು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!