ದೇಶ

ರಾಷ್ಟ್ರಪತಿ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆ!

Srinivasamurthy VN

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.

ಒಡಿಶಾದ ಬುಡಕಟ್ಟು ಜನಾಂಗದ ಮುರ್ಮು ಅವರು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಹೆಸರಿಸಲಾಗಿರುವ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಚುನಾಯಿತರಾದರೆ, 64 ವರ್ಷದ ಮುರ್ಮು ಅವರು ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ.

64 ವರ್ಷದ ಮುರ್ಮು ಅವರು 2017 ರ ಅಧ್ಯಕ್ಷೀಯ ಚುನಾವಣೆಯ ಮೊದಲು ಈ ಹುದ್ದೆಗೆ ಪ್ರಬಲ ಸ್ಪರ್ಧಿಯಾಗಿದ್ದರು. ಆದರೆ ಈ ಸಂದರ್ಭದಲ್ಲಿ ಅಂದಿನ ಬಿಹಾರ ರಾಜ್ಯಪಾಲ ರಾಮ್ ನಾಥ್ ಕೋವಿಂದ್ ಈ ಹುದ್ದೆಗೆ ಸರ್ಕಾರದ ಅಭ್ಯರ್ಥಿ ಎಂದು ಹೆಸರಿಸಲಾಯಿತು.

ಜಾರ್ಖಂಡ್‌ನ ಮೊದಲ ಮಹಿಳಾ ಗವರ್ನರ್, ದ್ರೌಪದಿ ಮುರ್ಮು ಕೌನ್ಸಿಲರ್ ಆಗಿ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು, ನಂತರ ರಾಯರಂಗ್‌ಪುರ ರಾಷ್ಟ್ರೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾದರು. ಒಡಿಶಾದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿದ್ದ ಶ್ರೀಮತಿ ಮುರ್ಮು ಅವರು ನವೀನ್ ಪಟ್ನಾಯಕ್ ಸಂಪುಟದಲ್ಲಿ ಬಿಜು ಜನತಾ ದಳ ಅಥವಾ ಬಿಜೆಡಿ ಬಿಜೆಪಿ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

SCROLL FOR NEXT