ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪುಲ್ವಾಮಾದ ತುಜ್ಜನ್ ಪ್ರದೇಶ ಮತ್ತು ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ಎರಡು  ಪ್ರತ್ಯೇಕ ಎನ್‌ಕೌಂಟರ್‌ಗಳು ಆರಂಭಗೊಂಡಿದ್ದು, ಸೋಪೋರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪುಲ್ವಾಮಾದ ತುಜ್ಜನ್ ಪ್ರದೇಶ ಮತ್ತು ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ಎರಡು  ಪ್ರತ್ಯೇಕ ಎನ್‌ಕೌಂಟರ್‌ಗಳು ಆರಂಭಗೊಂಡಿದ್ದು, ಸೋಪೋರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.

ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

ಸೋಪೋರ್‌ನ ತುಲಿಬಲ್ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ ಆಗಿ ಮಾರ್ಪಡಿಸಲಾಗಿದ್ದು, ಬಳಿಕ ಭದ್ರತಾ ಪಡೆಗಳು ಉಗ್ರರಿಗೆ ಪ್ರತ್ಯುತ್ತರ ನೀಡುತ್ತಿದ್ದಾರೆ. ಎರಡೂ ಸ್ಥಳಗಳಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

'ಮಲ್ಲಿಕಾರ್ಜುನ ಖರ್ಗೆಯಿಂದ ಸದಾ ಒತ್ತಡಕ್ಕೆ ಒಳಗಾಗಿರುತ್ತೇನೆ': ರಾಜ್ಯಸಭೆ ಸಭಾಪತಿ ಸಿಪಿ ರಾಧಾಕೃಷ್ಣನ್

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಜಾರ್ಖಂಡ್‌ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!