ಸಿಎಂ ಠಾಕ್ರೆ ಪ್ರತಿನಿಧಿಗಳ ಕಾರು 
ದೇಶ

ಮಹಾ ರಾಜಕೀಯ ಬಿಕ್ಕಟ್ಟು: ಸಿಎಂ ಠಾಕ್ರೆ ಪ್ರತಿನಿಧಿಗಳಿಂದ ಸೂರತ್ ನ ಹೋಟೆಲ್‌ನಲ್ಲಿ ಏಕನಾಥ್ ಶಿಂಧೆ ಭೇಟಿ, ಮುಂಬೈಗೆ ವಾಪಸ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳುಹಿಸಿದ್ದ ಶಿವಸೇನೆಯ ಇಬ್ಬರು ನಾಯಕರು ಸೂರತ್‌ನ ಹೋಟೆಲ್‌ನಲ್ಲಿ ತಂಗಿರುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಇತರ ಶಾಸಕರನ್ನು ಮಂಗಳವಾರ ಭೇಟಿ...

ಸೂರತ್: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳುಹಿಸಿದ್ದ ಶಿವಸೇನೆಯ ಇಬ್ಬರು ನಾಯಕರು ಸೂರತ್‌ನ ಹೋಟೆಲ್‌ನಲ್ಲಿ ತಂಗಿರುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಇತರ ಶಾಸಕರನ್ನು ಮಂಗಳವಾರ ಭೇಟಿ ಮಾಡಿ ಆಂತರಿಕ ಬಿಕ್ಕಟ್ಟನ್ನು ಶಮನಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿದರು.

ಠಾಕ್ರೆ ಅವರ ಆಪ್ತರಾದ ಮಿಲಿಂದ್ ನಾರ್ವೇಕರ್ ಮತ್ತು ರವೀಂದ್ರ ಫಾಟಕ್ ಅವರು ನಿನ್ನೆಯಿಂದ ಹೋಟೆಲ್ ನಲ್ಲಿ ತಂಗಿರುವ ಶಿಂಧೆ ಮತ್ತು ಇತರ ಶಾಸಕರೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದರು. ಆದರೆ ಚರ್ಚೆಯ ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನಾರ್ವೇಕರ್ ಮತ್ತು ಫಾಟಕ್ ಅವರು ರಸ್ತೆ ಮೂಲಕ ಮುಂಬೈಗೆ ತೆರಳಿದ್ದಾರೆ.

ಮಹಾರಾಷ್ಟ್ರದ ಎಂಎಲ್‌ಸಿ ಚುನಾವಣೆಯ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳ ನಂತರ ಶಿಂಧೆ ಮತ್ತು ಅವರ ನಿಷ್ಠಾವಂತ ಶಾಸಕರು ಸೋಮವಾರ ತಡರಾತ್ರಿ ಸೂರತ್‌ನ ಹೋಟೆಲ್‌ಗೆ ಆಗಮಿಸಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಅನ್ನು ಒಳಗೊಂಡಿರುವ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿಕೂಟವು ಹಿನ್ನಡೆ ಅನುಭವಿಸಿದ ಒಂದು ದಿನದ ನಂತರ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಶುರುವಾಗಿದೆ. ಸ್ಪರ್ಧಿಸಿದ್ದ ಐದೂ ವಿಧಾನ ಪರಿಷತ್ ಸ್ಥಾನದಲ್ಲಿ ಬಿಜೆಪಿ ವಿಜಯ ಸಾಧಿಸಿದ್ರೆ, ಕಾಂಗ್ರೆಸ್ ಅಭ್ಯರ್ಥಿಯೊಬ್ಬರಿಗೆ ಸೋಲಾಗಿದೆ. ಚುನಾವಣೆಯಲ್ಲಿ ಆಡಳಿತಾರೂಢ ಶಾಸಕರು ಅಡ್ಡ ಮತದಾನ ಮಾಡಿದ್ದಾರೆಂದು ಗೊತ್ತಾಗ್ತಿದ್ದಂತೆ ಮತ್ತೊಂದು ಒಡಕು ಶುರುವಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!