ಸೋನಿಯಾ ಗಾಂಧಿ 
ದೇಶ

ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇದೀಗ ಇನ್ನೂ ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆನ್ನಲಾಗಿದೆ.  ಸೋನಿಯಾ  ಗಾಂಧಿಯವರಿಗೆ ಕೋವಿಡ್ ದೃಢಪಟ್ಟ ನಂತರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅವರನ್ನು ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಮಾಡಲಾಗಿದೆ.

ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.  ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ED) ಹೆಚ್ಚಿನ ಸಮಯವನ್ನು ಕೋರಿದ್ದರು. ಬಳಿಕ

ಜೂನ್ 12 ರಂದು ಉಸಿರಾಟದ ತೊಂದರೆಯಿಂದ  ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ 2 ದಿನದ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT