ಬಂಡಾಯ ಶಾಸಕರು 
ದೇಶ

ಉದ್ಧವ್ ಠಾಕ್ರೆ ಮೇಲೆ ಯಾವುದೇ ದೂರುಗಳಿಲ್ಲ; ಎನ್‌ಸಿಪಿ, ಕಾಂಗ್ರೆಸ್ ಕಾರ್ಯವೈಖರಿಯಿಂದ ಅಸಮಾಧಾನ: ಶಿವಸೇನೆ ಬಂಡಾಯ ಶಾಸಕರು

ಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದ ಭಿನ್ನಮತೀಯರ ಪೈಕಿ ಒಬ್ಬರಾಗಿರುವ ಮಹಾರಾಷ್ಟ್ರದ ಶಿವಸೇನೆ ಸಚಿವರೊಬ್ಬರು, ಶಿವಸೇನಾ ನಾಯಕತ್ವದ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ, ಆದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಕಾರ್ಯವೈಖರಿಯಿಂದ ಅಸಮಾಧಾನವಾಗಿದೆ ಎಂದು ಅವರು ಬುಧವಾರ ಹೇಳಿದ್ದಾರೆ.

ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದ ಭಿನ್ನಮತೀಯರ ಪೈಕಿ ಒಬ್ಬರಾಗಿರುವ ಮಹಾರಾಷ್ಟ್ರದ ಶಿವಸೇನೆ ಸಚಿವರೊಬ್ಬರು, ಶಿವಸೇನಾ ನಾಯಕತ್ವದ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ, ಆದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಕಾರ್ಯವೈಖರಿಯಿಂದ ಅಸಮಾಧಾನವಾಗಿದೆ ಎಂದು ಅವರು ಬುಧವಾರ ಹೇಳಿದ್ದಾರೆ.

ಬಂಡಾಯ ಶಾಸಕರ ನಡುವೆ ಇರುವ ಮಹಾರಾಷ್ಟ್ರ ಸಚಿವ ಸಂದೀಪನ್ ಭೂಮಾರೆ ಅವರು ದೂರವಾಣಿ ಮೂಲಕ ಟಿವಿ ಚಾನೆಲ್‌ನೊಂದಿಗೆ ಮಾತನಾಡಿದ್ದು, ಶಿವಸೇನೆ ನಾಯಕತ್ವದ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ. ಎನ್‌ಸಿಪಿ ಮತ್ತು ಕಾಂಗ್ರೆಸ್ ಸಚಿವರೊಂದಿಗೆ ಕೆಲಸ ಮಾಡುವುದು ಕಷ್ಟವಾಗುತ್ತಿದೆ ಎಂದು ಈ ಕುರಿತು ನಾವು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೂ ದೂರು ನೀಡಿದ್ದೆವು ಎಂದು ಹೇಳಿದ್ದಾರೆ.

ಎನ್'ಸಿಪಿ ಹಾಗೂ ಕಾಂಗ್ರೆಸ್ ಸಚಿವರಿಂದ ನಮ್ಮ ಪ್ರಸ್ತಾವನೆಗಳು ಹಾಗೂ ಕೆಲಸ ಕಾರ್ಯಗಳಿಗೆ ಅನುಮೋದನೆ ಪಡೆದುಕೊಳ್ಳುವುದು ಬಹಳ ಕಷ್ಟಕರವಾಗುತ್ತಿದೆ. ನನಗೆ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕೆ ನನಗೆ ತೃಪ್ತಿಯಿದೆ. ಜೀವನದಲ್ಲಿ ಇದಕ್ಕಿಂತಲೂ ಇನ್ನೇನು ಬೇಕು. ಆದರೆ, ಜನಪ್ರತಿನಿಧಿಯಾಗಿ ನನ್ನ ಜನರ ಕುಂದುಕೊರತೆಗಳನ್ನು ಪರಿಹರಿಸಬೇಕಾಗಿದೆ. ಈ ಎರಡು ಮೈತ್ರಿ ಪಾಲುದಾರರಿಂದ ನಾನು ಅದನ್ನು ಸರಿಯಾಗಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಂಡಾಯ ಶಾಸಕರದಲ್ಲಿ ಇರುವ ಮತ್ತೊಬ್ಬ ನಾಯಕ ಸಂಜಯ್ ಶಿರ್ಸಾತ್ ಅವರು ಮಾತನಾಡಿ, ಪಕ್ಷದ 35 ಶಾಸಕರು ಗುವಾಹಟಿಯಲ್ಲಿದ್ದಾರೆ. ಮತ್ತಷ್ಟು ಶಾಸಕರು ಇಂದು ಸಂಜೆ ನಮ್ಮ ಜೊತೆಗೂಡಲಿದ್ದಾರೆ. ಇದಷ್ಟೇ ಅಲ್ಲದೆ, ಮೂರು ಸ್ವತಂತ್ರ ಶಾಸಕರೂ ನಮಗೆ ಬೆಂಬಲ ನೀಡಿದ್ದಾರೆ. ಎನ್'ಸಿಪಿ ಹಾಗೂ ಕಾಂಗ್ರೆಸ್ ಮಂತ್ರಿಗಳ ಹಗೆತನದ ವರ್ತನೆಯೇ ಶಾಸಕರು ಬಂಡಾಯವೇಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT