ಶಿವಸೇನೆ ಬಂಡಾಯ ಶಾಸಕರು 
ದೇಶ

'ಮಹಾ' ಸಂಘರ್ಷ; ರೆಬೆಲ್ ಶಾಸಕರ ಅನರ್ಹತೆಗೆ ಮನವಿ ಸಲ್ಲಿಕೆಗೆ ಠಾಕ್ರೆ ಬಣದ ಸಿದ್ಧತೆ

ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಪ್ರಸ್ತುತ ರೆಬೆಲ್ ಶಾಸಕರ ನಾಯಕತ್ವ ವಹಿಸಿರುವ ಏಕನಾಥ್ ಶಿಂಡೆ ಅವರ ಬಣದಲ್ಲಿರುವ 15 ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಮಾಡಲು ಉದ್ಧವ್ ಠಾಕ್ರೆ ಬಣ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ರೆಬೆಲ್ ಬಣದಲ್ಲಿ ಗುರುತಿಸಿಕೊಂಡಿರುವ ಸುಮಾರು 15 ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮಹಾರಾಷ್ಟ್ರ ವಿಧಾನಸಭೆ ಉಪಸಭಾಪತಿಗೆ ಶಿವಸೇನೆ ಮನವಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. 

ಇಂದೇ ಅನರ್ಹತೆ ಅರ್ಜಿ ಸಲ್ಲಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರದ ಕಾನೂನು ತಂಡದ ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಆಡಳಿತಾರೂಢ ಶಿವಸೇನೆ ಪಕ್ಷ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದಕ್ಕೆ ಇಂಬು ನೀಡುವಂತೆ ಇತ್ತ ಶಿವಸೇನೆ ವಕ್ತಾರ ಸಂಜಯ್ ರಾವತ್ ಅವರು ಬಂಡಾಯ ಶಾಸಕರಿಗೆ 24 ಗಂಟೆಗಳ ಗಡುವು ನೀಡಿ ಮುಂಬೈಗೆ ವಾಪಸ್ ಆಗುವಂತೆ ಎಚ್ಚರಿಕೆ ನೀಡಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel