ದೇಶ

ರಾಷ್ಟ್ರಪತಿ ಚುನಾವಣೆ: ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಜಗನ್ ಮೋಹನ್ ರೆಡ್ಡಿ ಬೆಂಬಲ

Nagaraja AB

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಿದ್ದಾರೆ. ಈ ಚುನಾವಣೆಯಲ್ಲಿ ಗೆದ್ದರೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸುವ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಅವರು ಒಳಗಾಗಲಿದ್ದಾರೆ.

ರಾಜ್ಯ ಸರ್ಕಾರದ ಅಧಿಕೃತ ಹೇಳಿಕೆ ಪ್ರಕಾರ, ಎಸ್ ಸಿ, ಎಸ್ ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಪ್ರಾತಿನಿಧ್ಯಕ್ಕೆ ಅವರು ಯಾವಾಗಲೂ ನೀಡುತ್ತಿರುವ ಪ್ರಾಮುಖ್ಯತೆಗೆ ಅನುಗುಣವಾಗಿ ಈ ಗೌರವ ಬಂದಿದೆ ಎಂದು ಜಗನ್ ನಂಬಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಜಗನ್ ಕೂಡಾ ಈ ಸಮುದಾಯಗಳ ಉನ್ನತಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ಸಂಪುಟ ಸಭೆಯಿಂದಾಗಿ ದ್ರೌಪದಿ ಮುರ್ಮು ಅವರ ನಾಮಪತ್ರ ಸಲ್ಲಿಕೆಗೆ ಜಗನ್ ಮೋಹನ್ ರೆಡ್ಡಿ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಬದಲಿಗೆ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಹಾಗೂ ಲೋಕಸಭಾ ಸದಸ್ಯ ಮಿಥುನ್ ರೆಡ್ಡಿ ಹಾಜರಾಗಲಿದ್ದಾರೆ.  ಜುಲೈ 18 ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

SCROLL FOR NEXT