ಸಾಂದರ್ಭಿಕ ಚಿತ್ರ 
ದೇಶ

ಅಹಮದಾಬಾದ್: ಮಕ್ಕಳ ಆಸ್ಪತ್ರೆ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ, 13 ನವಜಾತ ಶಿಶುಗಳು ಸೇರಿದಂತೆ 75 ಜನರ ರಕ್ಷಣೆ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ  ಮಕ್ಕಳ ಆಸ್ಪತ್ರೆ ಇರುವ ನಾಲ್ಕು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ನವಜಾತ ಶಿಶುಗಳು ಸೇರಿದಂತೆ 75 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ನಗರದಲ್ಲಿ  ಮಕ್ಕಳ ಆಸ್ಪತ್ರೆ ಇರುವ ನಾಲ್ಕು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ನವಜಾತ ಶಿಶುಗಳು ಸೇರಿದಂತೆ 75 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ನಗರದ ಪರಿಮಳ ಗಾರ್ಡನ್ ರಸ್ತೆಯಲ್ಲಿರುವ ದೇವ್ ಕಾಂಪ್ಲೆಕ್ ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಮಕ್ಕಳ ಆಸ್ಪತ್ರೆಯಿಂದ 13 ನವಜಾತ ಶಿಶುಗಳು ಮತ್ತು ಅವರ ಪೋಷಕರು ಸೇರಿದಂತೆ 75 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 1-30ರ ಸುಮಾರಿನಲ್ಲಿ ಮೂರನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸುದ್ದಿ ತಿಳಿಯಿತು. ನಂತರ ಸುಮಾರು 20 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾಗಿ ಅಗ್ನಿಶಾಮಕ ಅಧಿಕಾರಿ ಓಂ ಜಡೇಜಾ ತಿಳಿಸಿದ್ದಾರೆ.

ಐಸಿಯುನಲ್ಲಿದ್ದ ಮೂರು ಶಿಶುಗಳು ಸೇರಿದಂತೆ 13 ನವಜಾತ ಶಿಶುಗಳು, 75 ಜನರು ಹಾಗೂ ಅವರ ಪೋಷಕರನ್ನು ಕಟ್ಟಡದ ಟೆರೆಸ್ ಗೆ ಸ್ಥಳಾಂತರಿಸಿ ರಕ್ಷಿಸಲಾಗಿದೆ. ನಂತರ ಎಲ್ಲಾ ರೋಗಿಗಳನ್ನು ಆಂಬ್ಯುಲೆನ್ಸ್ ನಲ್ಲಿ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದ್ದಾರೆ. 

ಕೆಲ ತಾಸುಗಳ ನಂತರ ಬೆಂಕಿ ತಹಬದಿಗೆ ಬಂದಿದ್ದು, ಯಾವುದೇ ಹಾನಿ ಬಗ್ಗೆ ವರದಿಯಾಗಿಲ್ಲ, ರಕ್ಷಣಾ ಕಾರ್ಯಾಚರಣೆ ಮುಗಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT