ದೇಶ

ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ

Nagaraja AB

ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ.

ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ಟಾ ಸೆಟಲ್ವಾಡ್ ಅವರ ನಿವಾಸಕ್ಕೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಆಗಮಿಸಿದ್ದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಎಟಿಎಸ್ ತಂಡ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ ಎಂದು ವರದಿಯಾಗಿದೆ.

2002 ರ ಗುಜರಾತ್ ದಂಗೆಗಳ ಬಗ್ಗೆ ಸೆಟಲ್ವಾಡ್ ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.

2002ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು. ಆಗ ನರೇಂದ್ರ  ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

SCROLL FOR NEXT