ಪ್ರತ್ಯಕ್ಷ ದೃಶ್ಯ 
ದೇಶ

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ; ಮಹಿಳೆ ಸ್ಥಳದಲ್ಲೇ ಸಾವು!

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ಚೆನ್ನೈನಲ್ಲಿ ನಡೆದಿದೆ. ನಗರದ ಕೆ.ಕೆ ನಗರದಲ್ಲಿ ಈ ಘಟನೆ ನಡೆದಿದೆ. 

ಚೆನ್ನೈ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ಚೆನ್ನೈನಲ್ಲಿ ನಡೆದಿದೆ. ನಗರದ ಕೆ.ಕೆ ನಗರದಲ್ಲಿ ಈ ಘಟನೆ ನಡೆದಿದೆ. 

ಪೊಲೀಸರ ಪ್ರಕಾರ, 57 ವರ್ಷದ ಮಹಿಳೆ ತನ್ನ ಕಚೇರಿಯಿಂದ ಹಿಂದಿರುಗುತ್ತಿದ್ದಾಗ ಮರವು ಅವರ ಕಾರಿನ ಮೇಲೆ ಇದ್ದಕ್ಕಿದ್ದಂತೆ ಬಿದ್ದಿದೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚೆನ್ನೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಗರದ ಕೆಲವೆಡೆ ದಾಖಲೆ ಮಳೆಯಾಗಿದೆ. ತನ್ಮಧ್ಯೆ, ಚೆನ್ನೈನಲ್ಲಿ ಮುಂದಿನ ಕೆಲವು ದಿನಗಳವರೆಗೆ ಸಾಧಾರಣ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!