ಆಭರಣ ಅಂಗಡಿಗೆ ನುಗ್ಗಿ ದರೋಡೆ 
ದೇಶ

ಭಯಾನಕ ವಿಡಿಯೋ: ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡಿಕ್ಕಿ ಹತ್ಯೆ

ಬಿಹಾರದ ಆಭರಣ ಮಳಿಗೆಯೊಂದರಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿಗೆ ನುಗ್ಗಿ ಆಭರಣ ದೋಚಿದ್ದು ಮಾಲೀಕನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಲೂಟಿ ದೃಶ್ಯ ಸಿಸಿಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಪಾಟ್ನಾ: ಬಿಹಾರದ ಆಭರಣ ಮಳಿಗೆಯೊಂದರಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿಗೆ ನುಗ್ಗಿ ಆಭರಣ ದೋಚಿದ್ದು ಮಾಲೀಕನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಲೂಟಿ ದೃಶ್ಯ ಸಿಸಿಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಜೂನ್ 22 ರಂದು ರಾತ್ರಿ 8 ಗಂಟೆ ಸುಮಾರಿಗೆ ಬಿಹಾರದ ಹಾಜಿಪುರದಲ್ಲಿ ಈ ಘಟನೆ ನಡೆದಿದೆ.

ಹಾಜಿಪುರದ ಹೃದಯಭಾಗದಲ್ಲಿರುವ ಸುಭಾಷ್ ಮತ್ತು ಮದಾಯಿ ಚೌಕ್‌ಗಳ ಮಧ್ಯದಲ್ಲಿರುವ ನೀಲಂ ಜ್ಯುವೆಲರಿಗೆ ಐವರು ಶಸ್ತ್ರಸಜ್ಜಿತ ದರೋಡೆಕೋರರು ಪ್ರವೇಶಿಸುತ್ತಿರುವುದು ವೀಡಿಯೊದಲ್ಲಿ ಸೆರೆಯಾಗಿದೆ.

ದರೋಡೆಕೋರರು ಅಂಗಡಿಗೆ ನುಗ್ಗಿ ಗ್ರಾಹಕರಿಗೆ ಕಿರುಕುಳ ನೀಡಲಾರಂಭಿಸಿದ್ದಾರೆ. ಅಂಗಡಿಯ ಮಾಲೀಕ ಸುನಿಲ್ ಪ್ರಿಯದರ್ಶಿ ಲೂಟಿಯ ಪ್ರಯತ್ನವನ್ನು ವಿರೋಧಿಸಿದ್ದಾರೆ. ಆದರೆ ದರೋಡೆಕೋರರು ಅವರ ಮೇಲೆ ಹಲ್ಲೆ ಮಾಡಿ ಗುಂಡು ಹಾರಿಸಿದ್ದಾರೆ.

ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ. ಜ್ಯುವೆಲ್ಲರಿ ಶಾಪ್ ಇರುವ ಪ್ರದೇಶದಲ್ಲಿ ಹಾಗೂ ಸುತ್ತಮುತ್ತ ಹೆಚ್ಚುವರಿ ಭದ್ರತೆಯನ್ನೂ ನಿಯೋಜಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel