ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 11,739 ಹೊಸ ಕೇಸ್ ಪತ್ತೆ, 25 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,739 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,739 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,999ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92,576ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 10,917 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,72,398ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,53,940 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 86,07,12,079 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,97,08,51,580 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT