ಏಕನಾಥ್ ಖಡ್ಸೆ 
ದೇಶ

ಮಹಾ ಬಿಕ್ಕಟ್ಟು: ಶಿವಸೇನಾ ಬಂಡಾಯ ನಾಯಕ ಶಿಂಧೆ ಹಿಂದೆ ಪ್ರಬಲ ಶಕ್ತಿಗಳು ಕೆಲಸ ಮಾಡುತ್ತಿವೆ - ಎನ್‌ಸಿಪಿ ನಾಯಕ ಖಡ್ಸೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಿಂದೆ ಕೆಲವು "ಪ್ರಬಲ ಶಕ್ತಿ"ಗಳು ಕೆಲಸ ಮಾಡುತ್ತಿವೆ ಎಂದು ಹೊಸದಾಗಿ ಆಯ್ಕೆಯಾದ ಎನ್‌ಸಿಪಿ ಎಂಎಲ್‌ಸಿ ಏಕನಾಥ್ ಖಡ್ಸೆ ಅವರು...

ಥಾಣೆ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಿಂದೆ ಕೆಲವು "ಪ್ರಬಲ ಶಕ್ತಿ"ಗಳು ಕೆಲಸ ಮಾಡುತ್ತಿವೆ ಎಂದು ಹೊಸದಾಗಿ ಆಯ್ಕೆಯಾದ ಎನ್‌ಸಿಪಿ ಎಂಎಲ್‌ಸಿ ಏಕನಾಥ್ ಖಡ್ಸೆ ಅವರು ಭಾನುವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿಯ ಮಾಜಿ ನಾಯಕ ಖಡ್ಸೆ, ಮುಂದಿನ ದಿನಗಳಲ್ಲಿ ಶಿಂಧೆ ಹಿಂದೆ ಇರುವ "ಪ್ರಬಲ ಶಕ್ತಿ"ಗಳು ಯಾರು ಅಂತ ಬಹಿರಂಗಗೊಳ್ಳಲಿದೆ ಎಂದರು.

ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ ಇಂತಹ ಅಸ್ಥಿರ ಪರಿಸ್ಥಿತಿಗೆ ಹೋಗಿರುವುದನ್ನು ನಾನು ನೋಡಿಲ್ಲ. ಪ್ರಬಲ ಶಕ್ತಿಗಳ ಬೆಂಬಲವಿಲ್ಲದೆ ಶಿಂಧೆ ಇಂತಹ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

"ಇದು(ಬಂಡಾಯ) ಶಿವಸೇನೆಯ ಆಂತರಿಕ ಸಮಸ್ಯೆಯಾಗಿದೆ. ಆದರೆ, ಖಂಡಿತವಾಗಿಯೂ ಶಿಂಧೆ ಹಿಂದೆ ಪ್ರಬಲ ಶಕ್ತಿ ಕೆಲಸ ಮಾಡುತ್ತಿದೆ. ಅವರು ಪ್ರಬಲ ಶಕ್ತಿಗಳ ಬೆಂಬಲವಿಲ್ಲದೆ ಇಂತಹ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ನನ್ನ 40 ವರ್ಷಗಳಲ್ಲಿ ರಾಜಕೀಯ ಜೀವನದಲ್ಲಿ ರಾಜ್ಯದಲ್ಲಿ ಇಂತಹ ಅಸ್ಥಿರತೆಯನ್ನು ನಾನು ನೋಡಿಲ್ಲ" ಖಡ್ಸೆ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

‘ಪ್ರಜಾಪ್ರಭುತ್ವದ ಕರಾಳ ದಿನ’, 'ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ'; ಮಮತಾ ಬ್ಯಾನರ್ಜಿ ಕೆಂಡಾಮಂಡಲ

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

ಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!