ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ 
ದೇಶ

ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ; ವಿಡಿಯೋ ವೈರಲ್

ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಲಖಿಂಪುರ ಖೇರಿ: ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಮಹಂಗು ಖೇರಾ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿ ಶಾಲೆಗೆ 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪ್ರಾಂಶುಪಾಲ ಶಿಕ್ಷಕಿಗೆ ಬೂಟಿನಿಂದ ಹೊಡೆದಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. 

ಶಿಕ್ಷಕಿ ಶಾಲೆಗೆ ತಡವಾಗಿ ಬಂದಿದ್ದರಿಂದ ಕುಪಿತಗೊಂಡ ಪ್ರಾಂಶುಪಾಲ ಮೊದಲು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವೇಳೆ ಶಿಕ್ಷಕಿ ಮತ್ತು ಪ್ರಾಂಶುಪಾಲನ ನಡುವೆ ವಾಗ್ವಾದ ನಡೆದಿದ್ದು ನೋಡನೋಡುತ್ತಲೇ ಪ್ರಾಂಶುಪಾಲ ಶೂಗಳಿಂದ ಅವರನ್ನು ಥಳಿಸಿದ್ದಾರೆ. 20 ಸೆಕೆಂಡುಗಳ ಈ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಈ ಘಟನೆ ಕುರಿತು ಪ್ರಾಂಶಪಾಲರ ಮೇಲೆ ಶಿಕ್ಷಕಿ ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಸದ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಂಶುಪಾಲನನ್ನು ಸೇವೆಯಿಂದ ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT