ತೀಸ್ತಾ ಸೆಟಲ್ವಡ್ 
ದೇಶ

ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಹಸ್ತಾಂತರ

ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ.

ಅಹಮದಾಬಾದ್: ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ. ಆಕೆಯ ವಿರುದ್ಧ ಹೊಸದಾಗಿ ದಾಖಲಾಗಿರುವ ವಂಚನೆ, ಕ್ರಿಮಿನಲ್ ಪಿತೂರಿ ಕೇಸ್ ಗೆ ಸಂಬಂಧಿಸಿದಂತೆ ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ: ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ
ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್  ಡಿ. ಬಿ. ಬರಾದ್ ದಾಖಲಿಸಿದ ದೂರಿನ ಆಧಾರದ ಮೇಲೆ ಅಹಮದಾಬಾದ್ ಅಪರಾಧ ವಿಭಾಗದಲ್ಲಿ ಆಕೆಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.  ಇಲ್ಲಿಗೆ ಅವರನ್ನು ಕರೆತಂದ ನಂತರ ಇಂದು ಬೆಳಗ್ಗೆ ನಗರ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧನಕ್ಕೊಳಪಡಿಸಲಾಗುವುದು ಎಂದು ಅಪರಾಧ ವಿಭಾಗದ ಮೂಲಗಳು ತಿಳಿಸಿವೆ.

ಶನಿವಾರ ಮುಂಬೈಯಲ್ಲಿ ತೀಸ್ತಾ ಸೆಟಲ್ವಡ್ ಅವರನ್ನು ಬಂಧಿಸಿದ ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸುವ ಸಲುವಾಗಿ ಅವರನ್ನು ಸಾಂತಾಕ್ರೂಸ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಗುಜರಾತ್ ಪೊಲೀಸರು ರಸ್ತೆ ಮೂಲಕ ಅಹಮದಾಬಾದ್ ಗೆ ಕರೆದೊಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT