ಹತ್ಯೆ (ಸಾಂಕೇತಿಕ ಚಿತ್ರ) 
ದೇಶ

ಮದ್ಯಸೇವನೆಗೆ ಹಣ ನೀಡಲಿಲ್ಲವೆಂದು ಅಜ್ಜ-ಅಜ್ಜಿಯ ಹತ್ಯೆ ಮಾಡಿದ ಯುವಕ!

ಮದ್ಯಸೇವನೆಗೆ ಹಣ ನೀಡಲಿಲ್ಲವೆಂದು ಯುವಕನೋರ್ವ ಅಜ್ಜ-ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದರ್ಮಿ ಗ್ರಾಮದಲ್ಲಿ ನಡೆದಿದೆ. 

ಲಖನೌ: ಮದ್ಯಸೇವನೆಗೆ ಹಣ ನೀಡಲಿಲ್ಲವೆಂದು ಯುವಕನೋರ್ವ ಅಜ್ಜ-ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದರ್ಮಿ ಗ್ರಾಮದಲ್ಲಿ ನಡೆದಿದೆ. 

ಗ್ರಾಮದಲ್ಲಿನ ಮನೆಯೊಂದರಲ್ಲಿ ವೃದ್ಧ ದಂಪತಿಯ ಮೃತ ದೇಹಗಳು ಎರಡು ಪ್ರತ್ಯೇಕ ರೂಮ್ ಗಳಲ್ಲಿ ಪತ್ತೆಯಾಗಿದೆ.

ಮದ್ಯಸೇವನೆಗೆ ಹಣ ನೀಡದ್ದಕ್ಕಾಗಿ ವೃದ್ಧ ದಂಪತಿ ಹಾಗೂ ಮೊಮ್ಮಗನ ನಡುವೆ ವಾಗ್ವಾದ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಯುವಕ ಹಿಮೇಶ್ (20) ಪ್ರೇಮ್ ಶಂಕರ್ (65) ಭವನ್ ದೇವಿ (60) ಎಂಬ ದಂಪತಿಯನ್ನು ಹತ್ಯೆ ಮಾಡಿದ್ದಾರೆ. 

ದೆಹಲಿಯಲ್ಲಿ ಜೀವಿಸುತ್ತಿದ್ದ ಇವರು ವಿವಾಹ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದ ಈ ಗ್ರಾಮಕ್ಕೆ ಆಗಮಿಸಿದ್ದರು. ಹಿಮೇಶ್ ವಿರುದ್ಧ ಕುಟುಂಬ ಸದಸ್ಯರೇ ಕೊಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ರವಾನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

SCROLL FOR NEXT