ವಿಪಕ್ಷಗಳ ಮುಖಂಡರೊಂದಿಗೆ ಯಶವಂತ ಸಿನ್ಹಾ 
ದೇಶ

ರಾಷ್ಟ್ರಪತಿ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಹೋರಾಟ, ವ್ಯಕ್ತಿಗಳದ್ದಲ್ಲ: ವಿಪಕ್ಷಗಳ ಮುಖಂಡರು

ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಸಿದ್ದು, ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವಾಗಿದೆ, ವ್ಯಕ್ತಿಗಳಲ್ಲ ಎಂದು ಅನೇಕ ವಿಪಕ್ಷಗಳ ಮುಖಂಡರು ಸೋಮವಾರ ಹೇಳಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಸಿದ್ದು, ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವಾಗಿದೆ, ವ್ಯಕ್ತಿಗಳಲ್ಲ ಎಂದು ಅನೇಕ ವಿಪಕ್ಷಗಳ ಮುಖಂಡರು ಸೋಮವಾರ ಹೇಳಿದ್ದಾರೆ.

ಒಂದು ಕಡೆ ಆರ್ ಎಸ್ ಎಸ್ ದ್ವೇಷ ಮತ್ತು ಇನ್ನೊಂದು ಕಡೆ ಎಲ್ಲ ವಿರೋಧ ಪಕ್ಷಗಳ ಅನುಕಂಪ ಎಂಬ ಎರಡು ಸಿದ್ಧಾಂತಗಳ ನಡುವಿನ ನಿಜವಾದ ಹೋರಾಟ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿದೆ.

ನಾವೆಲ್ಲ ಒಟ್ಟಾಗಿ ಯಶವಂತ ಸಿನ್ಹಾ ಅವರನ್ನು ಬೆಂಬಲಿಸುತ್ತೇವೆ. ವ್ಯಕ್ತಿಗತವಾಗಿ ನಾವು ಬೆಂಬಲಿಸುತ್ತೇವೆ ಆದರೆ, ಎರಡು ಸಿದ್ದಾಂತಗಳ ನಡುವೆ ನಿಜವಾದ ಹೋರಾಟವಿದೆ. ಒಂದು ಆರ್ ಎಸ್ ಎಸ್ ನ ಕೋಪ, ದ್ವೇಷದ ಸಿದ್ದಾಂತ, ಮತ್ತೊಂದೆಡೆ ಎಲ್ಲಾ ವಿಪಕ್ಷಗಳ ಅನುಕಂಪದ ಸಿದ್ಧವಾಗಿದೆ. ಎಲ್ಲಾ ವಿರೋಧ ಪಕ್ಷಗಳು ಸಿನ್ಹಾ ಅವರನ್ನು ಬೆಂಬಲಿಸಲಿವೆ ಎಂದು ಹೇಳಿದರು.

ಯಶವಂತ ಸಿನ್ಹಾ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಎಂದು ಟಿಎಂಸಿ ಮುಖಂಡ ಸೌಗತ ರಾಯ್ ಹೇಳಿದ್ದಾರೆ. ಇದು ಗುರುತಿನ ರಾಜಕಾರಣದ ಪ್ರಶ್ನೆಯೇ ಅಲ್ಲ ಎಂದು ಸಿಪಿಐ (ಎಂ) ನ ಸೀತಾರಾಮ್ ಯೆಚೂರಿ ಹೇಳಿದ್ದಾರೆ.  ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ ಆದರೆ, ಇದು ಸಿದ್ಧಾಂತಗಳ ಸ್ಪರ್ಧೆಯಾಗಿದೆ ಎಂದಿದ್ದಾರೆ.

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗಾಗಿ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಕೆ ವೇಳೆ ಅನೇಕ ವಿಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!