ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಅಬ್ಬರ: ದೇಶದಲ್ಲಿಂದು 17,073 ಹೊಸ ಕೇಸ್ ಪತ್ತೆ, 21 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 17,073 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 17,073 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,07,046ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,020ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 94,420ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 15,208 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,87,606ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,03,604 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 86,10,15,683 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,97,11,91,329 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT