ಬಂಧಿತ ಉಗ್ರ 
ದೇಶ

ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶ

ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಶ್ರೀನಗರ: ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರೆಗೆ ಮುನ್ನ ಹೆಚ್ಚಿನ ಭದ್ರತಾ ಕ್ರಮವಾಗಿ, ಪೊಲೀಸರು ಠಾಣೆ ದೋಡಾದ ಪಟ್ಟಣದ ಹೊರವಲಯದಲ್ಲಿ ತಡೆಯನ್ನು ಹಾಕಿದ್ದರು. ಈ ಸಂದರ್ಭದಲ್ಲಿ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತಿದ್ದ ಯುವಕನನ್ನು ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ವಿಶೇಷ ತಂಡವು ತನಿಖೆಯನ್ನು ಪ್ರಾರಂಭಿಸಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಫರೀದ್ ಅಹ್ಮದ್ ಶಂಕಿತನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆದು ದೋಡಾದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿದ್ದ ಎಂದು ತಿಳಿದುಬಂದಿದೆ. ಸಮಯೋಚಿತ ಮತ್ತು ಕ್ಷಿಪ್ರ ಕ್ರಮದಿಂದಾಗಿ ಈ ದುಷ್ಕೃತ್ಯವನ್ನು ವಿಫಲಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್