ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ 
ದೇಶ

'ಮಹಾ' ಸರ್ಕಾರ ಬಿಕ್ಕಟ್ಟು: 9 ಬಂಡಾಯ ಸಚಿವರ ಖಾತೆಗಳನ್ನು ಇತರ ಶಾಸಕರಿಗೆ ಹಸ್ತಾಂತರಿಸಿದ ಸಿಎಂ ಉದ್ಧವ್ ಠಾಕ್ರೆ

ಮಹಾ ವಿಕಾಸ ಅಘಾಡಿ ಮೈತ್ರಿ ಸರ್ಕಾರದ ರಾಜಕೀಯ ಅಸ್ಥಿರತೆ ಮುಂದುವರಿಯುತ್ತಿದ್ದಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಸ್ತುತ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಒಂಬತ್ತು ಬಂಡಾಯ ಸಚಿವರ ಖಾತೆಗಳನ್ನು ಇತರ ಸಚಿವರಿಗೆ ಸೋಮವಾರ ಹಸ್ತಾಂತರಿಸಿದ್ದಾರೆ.

ಮುಂಬೈ: ಮಹಾ ವಿಕಾಸ ಅಘಾಡಿ (MVA) ಮೈತ್ರಿ ಸರ್ಕಾರದ ರಾಜಕೀಯ ಅಸ್ಥಿರತೆ ಮುಂದುವರಿಯುತ್ತಿದ್ದಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಸ್ತುತ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಒಂಬತ್ತು ಬಂಡಾಯ ಸಚಿವರ ಖಾತೆಗಳನ್ನು ಇತರ ಸಚಿವರಿಗೆ ಸೋಮವಾರ ಹಸ್ತಾಂತರಿಸಿದ್ದಾರೆ.

ಆಡಳಿತದ ಅನುಕೂಲಕ್ಕಾಗಿ ಬಂಡಾಯ ಸಚಿವರ ಖಾತೆಗಳನ್ನು ಇತರ ಸಚಿವರಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ. ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಇದುವರೆಗೆ ಒಂಬತ್ತು ಸಚಿವರು ಸೇರಿಕೊಂಡಿದ್ದಾರೆ.

ಶಿವಸೇನೆಯು ಈಗ ಸಿಎಂ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ, ಅನಿಲ್ ಪರಬ್ ಮತ್ತು ಸುಭಾಷ್ ದೇಸಾಯಿ ಸೇರಿದಂತೆ ನಾಲ್ಕು ಸಂಪುಟ ದರ್ಜೆ ಸಚಿವರನ್ನು ಹೊಂದಿದೆ. ಆದಿತ್ಯ ಠಾಕ್ರೆ ಹೊರತುಪಡಿಸಿ ಉಳಿದ ಮೂವರು ಎಂಎಲ್‌ಸಿಗಳು.

ಶಿವಸೇನಾ ನೇತೃತ್ವದ ತ್ರಿಪಕ್ಷೀಯ ಮಹಾ ವಿಕಾಸ್ ಅಘಾಡಿ (MVA) ಸರ್ಕಾರದಲ್ಲಿ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಪಕ್ಷವು ಬಂಡಾಯಕ್ಕೆ ಮೊದಲು 10 ಕ್ಯಾಬಿನೆಟ್ ದರ್ಜೆಯ ಮಂತ್ರಿಗಳನ್ನು ಹೊಂದಿತ್ತು. ಶಿವಸೇನಾ ಕೋಟಾದಿಂದ ಇಬ್ಬರು ಸೇರಿದಂತೆ ನಾಲ್ವರು ರಾಜ್ಯ ಮಂತ್ರಿಗಳನ್ನು (MoS) ಹೊಂದಿತ್ತು.

ಎಲ್ಲಾ ನಾಲ್ವರು ರಾಜ್ಯ ಸಚಿವರುಗಳು ಗುವಾಹಟಿಯ ಬಂಡಾಯ ಗುಂಪನ್ನು ಸೇರಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!