ಸೋನಿಯಾ ಗಾಂಧಿ 
ದೇಶ

ನವದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಕೇಸ್ ದಾಖಲು

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ. ಮಾಧವನ್ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಕೇಸ್ ದಾಖಲಾಗಿದೆ.  

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ. ಮಾಧವನ್ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಕೇಸ್ ದಾಖಲಾಗಿದೆ. 26 ವರ್ಷದ ಯುವತಿಯೊಬ್ಬಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉದ್ಯೋಗ ಕೊಡಿಸುವ ನೆಪದಲ್ಲಿ ಆರೋಪಿ ಆಮಿಷವೊಡ್ಡಿದ್ದರು ಮತ್ತು ಮದುವೆಯಾಗುವುದಾಗಿ ನಂಬಿಸಿದ್ದರು ಎಂದು ಯುವತಿ ಆರೋಪಿರುವುದಾಗಿ ಅವರು ಹೇಳಿದ್ದಾರೆ. ತನ್ನ ಮೇಲೆ ಅತ್ಯಾಚಾರವಾಗಿದ್ದು, ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು ಎಂದು ಯುವತಿ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  

ಈ ಸಂಬಂಧ ಜೂನ್ 25 ರಂದು ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ದ್ವಾರಕ ಡಿಸಿಪಿ ಎಂ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.

ಹಿರಿಯ ರಾಜಕೀಯ ನಾಯಕರೊಬ್ಬರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ 71 ವರ್ಷದ ವ್ಯಕ್ತಿಯ ವಿರುದ್ಧದ ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಡಿಸಿಪಿ ರಾಜಕೀಯ ಮುಖಂಡನ ಹೆಸರನ್ನು ಹೇಳದಿದ್ದರೂ, ಮಾಧವನ್ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಚೀನಾದ ಹಸ್ತಕ್ಷೇಪ: ಪನಾಮ ಧ್ವಜದ ಹಡಗುಗಳಿಗೆ ತಡೆ, ಸಿಡಿದೆದ್ದ ಅಮೆರಿಕ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

IPL 2026: RCB ವಿರುದ್ಧದ ಹೈ-ವೋಲ್ಟೇಜ್‌ ಪಂದ್ಯಕ್ಕೂ ಮೊದಲೇ ಧೋನಿ ಕಮ್‌ಬ್ಯಾಕ್‌?

SCROLL FOR NEXT