ದೇಶ

ಬಾಳ ಸಾಹೇಬ್, ಆನಂದ್ ದಿಘೆಗೆ ಸಂದ ಜಯ: ಸುಪ್ರೀಂ ಕೋರ್ಟ್ ಆದೇಶ ಕುರಿತು ಏಕನಾಥ್ ಶಿಂಧೆ ಪ್ರತಿಕ್ರಿಯೆ

Nagaraja AB

ಮುಂಬೈ: ಅನರ್ಹತೆ ನೋಟಿಸ್ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಬಾಳ ಠಾಕ್ರೆ ಮತ್ತು ಆನಂದ್ ದಿಘೆ ಅವರಿಗೆ ಸಂದ ಜಯವಾಗಿದೆ ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಸೋಮವಾರ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಟ್ವೀಟ್ ಮಾಡಿರುವ ಏಕನಾಥ್ ಶಿಂಧೆ, ಇದು ಹಿಂದುತ್ವ ಸಾಮ್ರಾಟ ಬಾಳಸಾಹೇಬ್ ಠಾಕ್ರೆ ಅವರ ಹಿಂದೂತ್ವ ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬ್ ಅವರ ಚಿಂತನೆಗೆ ಸಂದ ಗೆಲುವು ಎಂದಿದ್ದಾರೆ.

ಅನರ್ಹತೆ ನೋಟಿಸ್‌ಗೆ ಉತ್ತರಿಸಲು 16 ಅತೃಪ್ತ ಶಾಸಕರಿಗೆ ಉಪಸಭಾಪತಿ ನೀಡಿದ ಸಮಯವನ್ನು ಜುಲೈ 11 ರವರೆಗೆ ಸುಪ್ರೀಂಕೋರ್ಟ್ ವಿಸ್ತರಿಸಿದೆ.

ಆದಾಗ್ಯೂ, ವಿಧಾನಸಭೆಯಲ್ಲಿ ಯಾವುದೇ ವಿಶ್ವಾಸಮತ ಯಾಚನೆ ನಡೆಸಬಾರದು ಎಂಬ ಮಹಾರಾಷ್ಟ್ರ ಸರ್ಕಾರದ ಅರ್ಜಿ ಕುರಿತು ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿತು. ಕಾನೂನುಬಾಹಿರ ಸಂದರ್ಭದಲ್ಲಿ ಯಾವಾಗ ಬೇಕಾದರೂ ಇದನ್ನು ಅವರು ಕೈಗೊಳ್ಳಬಹುದು ಎಂದು ಹೇಳಿತು.

SCROLL FOR NEXT