ದೇಶ

ನಾಳೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ: ಶಿವಸೇನೆ ಸಂಸದ ಸಂಜಯ್ ರಾವತ್

Lingaraj Badiger

ಮುಂಬೈ: ಜಾರಿ ನಿರ್ದೇಶನಾಲಯ ತಮಗೆ ಸಮನ್ಸ್ ಜಾರಿ ಮಾಡಿರುವ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿದ ಶಿವಸೇನೆ ಸಂಸದ ಸಂಜಯ್ ರಾವತ್ ಅವರು, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಡುವುದನ್ನು ತಡೆಯುವ "ಪಿತೂರಿ" ಇದು ಎಂದು ಹೇಳಿದ್ದಾರೆ. ಅಲ್ಲದೆ ಮಂಗಳವಾರ ಇಡಿ ಮುಂದೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ನಾಳೆ ನಾನು ಅಲಿಬಾಗ್‌ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಬೇಕಾಗಿರುವುದಿಲ್ಲ ಇಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಶಿವಸೇನಾ ಮುಖ್ಯ ವಕ್ತಾರ ಸಂಜಯ್ ರಾವತ್ ಅವರು ತಿಳಿಸಿದ್ದಾರೆ.

ಅವರು ನನ್ನನ್ನು ಕೊಂದರೂ ನಾನು ಮಹಾರಾಷ್ಟ್ರದ ಬಂಡಾಯ ಶಾಸಕರು ಹೋಗಿರುವ "ಗುವಾಹಟಿ ಮಾರ್ಗ" ಹಿಡಿಯುವುದಿಲ್ಲ ರಾವತ್ ಹೇಳಿದ್ದಾರೆ.

ಇದಕ್ಕು ಮುನ್ನ ಜಾರಿ ನಿರ್ದೇಶನಾಲಯ ನನಗೆ ಸಮನ್ಸ್ ಜಾರಿಗೊಳಿಸಿದೆ ಎಂಬುದನ್ನು ಈಗಷ್ಟೇ ತಿಳಿದುಕೊಂಡೆ. ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಾವೆಲ್ಲಾ ಬಾಳಾಸಾಹೇಬರ ಶಿವಸೈನಿಕರು. ಜಾರಿ ನಿರ್ದೇಶನಾಲಯದ ಸಮನ್ಸ್ ಷಡ್ಯಂತ್ರವಾಗಿದ್ದು, ನನ್ನ ಶಿರಚ್ಛೇದ ಮಾಡಿದರೂ ನಾನು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ರಾವತ್ ಟ್ವೀಟ್ ಮಾಡಿದ್ದು, ದೇವೇಂದ್ರ ಫಡ್ನವಿಸ್ ಅವರನ್ನು ಟ್ಯಾಗ್ ಮಾಡಿದ್ದಾರೆ. 

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 28 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ರಾಜ್ಯಸಭಾ ಸದಸ್ಯ ರಾವತ್ ಅವರಿಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT