ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ 11,793 ಹೊಸ ಪ್ರಕರಣ, 27 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣ ಕೊಂಚ ಇಳಿಕೆಯಾಗಿದ್ದು, ದೇಶದಲ್ಲಿ ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 11,793 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ. 

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣ ಕೊಂಚ ಇಳಿಕೆಯಾಗಿದ್ದು, ದೇಶದಲ್ಲಿ ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 11,793 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ. 

ಕಳೆದ 24 ಗಂಟೆಗಳಲ್ಲಿ 9,486 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,97,092 ಆಗಿದೆ. ದೇಶದಲ್ಲಿ ಪ್ರಸ್ತುತ ಸಕ್ರಿಯ ಸೋಂಕಿತರ ಸಂಖ್ಯೆ 96 ಸಾವಿರದ 700 ಆಗಿದೆ. ಸಕ್ರಿಯ ಕೇಸುಗಳು ಶೇಕಡಾ 0.22ರಷ್ಟಿದ್ದು, ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇಕಡಾ 98.57ರಷ್ಟಿದೆ. 

ಕಳೆದ 24 ಗಂಟೆಗಳಲ್ಲಿ 4,73,717 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 86.14 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಕೋವಿಡ್-19 ವಿರುದ್ಧ ಹೋರಾಡಲು ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 197.31 ಕೋಟಿ ಲಸಿಕೆಯನ್ನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ