ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ: ದೇಶದಲ್ಲಿಂದು 14,506 ಹೊಸ ಕೇಸ್ ಪತ್ತೆ, 30 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ದೇಶದಲ್ಲಿ ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 14,506 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ.
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ದೇಶದಲ್ಲಿ ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 14,506 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,33,345ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,077ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 99,602ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 11,574 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,28,0,8666ಕ್ಕೆ ತಲುಪಿದೆ.
ಇದನ್ನೂ ಓದಿ: ಸೋಂಕು ಕಂಡು ಬಂದರೆ ಶಾಲಾ, ಕಾಲೇಜು ಮುಚ್ಚುವ ಅಗತ್ಯವಿಲ್ಲ: ಆರೋಗ್ಯ ಇಲಾಖೆಯಿಂದ ಪರಿಷೃತ ಮಾರ್ಗಸೂಚಿ ಪ್ರಕಟ
ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,73,717 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 86,14,89,400 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,97,46,57,138 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.