ಏಕನಾಥ್ ಶಿಂಧೆ 
ದೇಶ

'ಮಹಾ' ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚಿಸಲು ಠಾಕ್ರೆಗೆ ರಾಜ್ಯಪಾಲ ಸೂಚನೆ; ಗುರುವಾರ ಮುಂಬೈಗೆ ವಾಪಸ್- ಏಕನಾಥ್ ಶಿಂಧೆ

ನಾಳೆ ಮುಂಬೈಗೆ ತೆರಳಲಿದ್ದು, ಬಹುಮತ ಸಾಬೀತು ಪಡಿಸಿ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುತ್ತೇನೆಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ.

ಗುವಾಹಟಿ (ಅಸ್ಸಾಂ): ನಾಳೆ ಮುಂಬೈಗೆ ತೆರಳಲಿದ್ದು, ಬಹುಮತ ಸಾಬೀತು ಪಡಿಸಿ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುತ್ತೇನೆಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ. 

ನಾಲ್ವರು ಭಿನ್ನಮತೀಯ ಶಾಸಕರೊಂದಿಗೆ ಇಂದು ಬೆಳಗ್ಗೆ ಏಕನಾಥ್ ಶಿಂಧೆಯವರು ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರದ ಶಾಂತಿ ಹಾಗೂ ಸಂತೋಷಕ್ಕಾಗಿ ಪ್ರಾರ್ಥನೆ ಮಾಡಲು ನಾನಿಲ್ಲಿಗೆ ಬಂದಿದ್ದೇನೆ. ನಾಳೆ ಮುಂಬೈಗೆ ತೆರಳಲಿದ್ದು, ಬಹುಮತ ಸಾಬೀತುಪಡಿಸುತ್ತೇನೆ. ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುತ್ತೇನೆಂದು ಹೇಳಿದರು. 

ನಿನ್ನೆ ಹೇಳಿಕೆ ನೀಡಿದ್ದ ಏಕನಾಥ್ ಶಿಂಧೆ. 50ಕ್ಕೂ ಹೆಚ್ಚು ಶಾಸಕರ ಬೆಂಬಲ ನನಗಿದ್ದು, ಶೀಘ್ರದಲ್ಲೇ ಮುಂಬೈಗೆ ಮರಳುತ್ತೇನೆ, ಬಾಳಾ ಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯುತ್ತೇನೆಂದು ಹೇಳಿದ್ದರು. 

ಈ ನಡುವೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದು, ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯುವ ಮೂಲಕ ಬಹುಮತವನ್ನು ಸಾಬೀತುಪಡಿಸುವಂತೆ ಸೂಚಿಸಿದ್ದಾರೆ. ಸಂಜೆ 5 ವೇಳೆಗೆ ವಿಶ್ವಾಸ ಮತಯಾಚನೆ ಪೂರ್ಣಗೊಳಿಸುವಂತೆಯೂ ಸೂಚಿಸಿದ್ದಾರೆಂದು ತಿಳಿದುಬಂದಿದೆ,

ಈ ಎಲ್ಲಾ ಬೆಳವಣಿಗೆ ನಡುವೆ ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ 8 ಸ್ವತಂತ್ರ ಶಾಸಕರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲರಿಗೆ ಪತ್ರವನ್ನು ಸಲ್ಲಿಸಿದ್ದು, ಕೂಡಲೇ ವಿಶ್ವಾಸಮತ ಯಾಚನೆ ಮಾಡುವಂತೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್