ಎನ್ಐಎ ಅಧಿಕಾರಿಗಳ ಸಾಂದರ್ಭಿಕ ಚಿತ್ರ 
ದೇಶ

ಉದಯ್ ಪುರ ಹತ್ಯೆ ಪ್ರಕರಣ: ಜನರಲ್ಲಿ ಭಯ ಸೃಷ್ಟಿಸುವ ಉದ್ದೇಶ; ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿದ ಎನ್ಐಎ

ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಭೀಕರ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ದೇಶದ ಜನರಲ್ಲಿ ಭಯ ಉಂಟುಮಾಡುವುದು ಈ ಹತ್ಯೆಯ ಉದ್ದೇಶವಾಗಿತ್ತು ಎಂದು ಹೇಳಿದೆ. 

ನವದೆಹಲಿ: ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಭೀಕರ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ದೇಶದ ಜನರಲ್ಲಿ ಭಯ ಉಂಟುಮಾಡುವುದು ಈ ಹತ್ಯೆಯ ಉದ್ದೇಶವಾಗಿತ್ತು ಎಂದು ಹೇಳಿದೆ. 

ಸಂಸ್ಥೆಯ ವಕ್ತಾರರು ಮಾತನಾಡಿ, ತನಿಖಾ ತಂಡ ಉದಯ್ ಪುರಕ್ಕೆ ಈಗಾಗಲೇ ತೆರಳಿದ್ದು ತ್ವರಿತ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ. ಹಂತಕರು ಸಾಮಾಜಿಕ ಜಾಲತಾಣದಲ್ಲಿ ಹತ್ಯೆಗೆ ತಾವೇ ಹೊಣೆ ಹೊತ್ತಿದ್ದು, ಜನರಿಗೆ ಭಯ ಮೂಡಿಸಲು ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. 

ಯುಎಪಿಎ ತಡೆ ಕಾಯ್ದೆಯ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ಪ್ರಾರಂಭದಲ್ಲಿ ಪ್ರಕರಣವನ್ನು ಧನ್ಮಂಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು.

ಇದನ್ನೂ ಓದಿ: ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ  ಎಎಸ್ಐ ಅಮಾನತು
 
ಕನ್ಹಯ್ಯ ಲಾಲ್ ಭೀಕರ ಹತ್ಯೆಗೆ ಯೋಜನೆ ರೂಪಿಸಿದ ಆರೋಪದಡಿ ಐಪಿಸಿ ಸೆಕ್ಷನ್ 452, 302, 152 (ಎ) 153 (ಬಿ), 295 (A) 34ರ ಅಡಿಯಲ್ಲಿ ಹಾಗೂ ಯುಎಪಿಎಯ ಸೆಕ್ಷನ್ 16,18, 20, ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel