ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಕಚೇರಿ 
ದೇಶ

ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸುವಂತೆ ಎನ್ಐಎಗೆ ಗೃಹ ಸಚಿವಾಲಯ ಸೂಚನೆ

ರಾಜಸ್ತಾನದ ಉದಯಪುರದಲ್ಲಿ ದರ್ಜಿಯ ಹತ್ಯೆ ಪ್ರಕರಣವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ಘಟನೆಗೆ ಸಂಬಂಧಪಟ್ಟಂತೆ ಸಮಗ್ರ ಹಾಗೂ ವಿಸ್ತಾರವಾಗಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಿದೆ.

ನವದೆಹಲಿ: ರಾಜಸ್ತಾನದ ಉದಯಪುರದಲ್ಲಿ ದರ್ಜಿಯ ಹತ್ಯೆ ಪ್ರಕರಣವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ಘಟನೆಗೆ ಸಂಬಂಧಪಟ್ಟಂತೆ ಸಮಗ್ರ ಹಾಗೂ ವಿಸ್ತಾರವಾಗಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಿದೆ.

ರಾಜಸ್ತಾನದ ಉದಯಪುರದಲ್ಲಿ ಟೈಲರ್ ನ ಹತ್ಯೆ ಪ್ರಕರಣವನ್ನು ಅತ್ಯಂತ ಭಯಾನಕ ಎಂದು ಬಣ್ಣಿಸಿರುವ ಗೃಹ ಇಲಾಖೆ ಇದರ ಹಿಂದೆ ಯಾವುದಾದರೂ ಸಂಘಟನೆಯ ಅಥವಾ ಅಂತಾರಾಷ್ಟ್ರೀಯ ಸಂಘಟನೆಗಳು, ವ್ಯಕ್ತಿಗಳ ಕೈವಾಡವಿದೆಯೇ ಎಂದು ಸಹ ತನಿಖೆ ನಡೆಸಲಿದೆ.

ರಾಜಸ್ತಾನದ ಉದಯಪುರದಲ್ಲಿ ನಿನ್ನೆ ಕನ್ನಯ್ಯ ಲಾಲ್ ತೆಲಿ ಎಂಬ ದರ್ಜಿಯ ಅತ್ಯಂತ ಭೀಕರ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಕುಕೃತ್ಯದ ಹಿಂದೆ ಯಾವುದಾದರೂ ಸಂಘಟನೆಯ ಅಥವಾ ಅಂತಾರಾಷ್ಟ್ರೀಯ ಸಂಘಟನೆಯ ಕೈವಾಡವಿದೆಯೇ ಎಂದು ಸಮಗ್ರವಾಗಿ ತನಿಖೆ ಮಾಡಲಾಗುತ್ತದೆ ಎಂದರು.

ರಾಜಸ್ಥಾನ ಪೊಲೀಸರು ಬಂಧಿಸಿರುವ ಇಬ್ಬರು ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ನಿಂದ ಪ್ರಭಾವಿತರಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯ ನಂತರ ಗೃಹ ಸಚಿವಾಲಯ ನಿನ್ನೆ ಮಂಗಳವಾರ ರಾತ್ರಿ ತನಿಖಾ ತಂಡವನ್ನು ಸ್ಥಳಕ್ಕೆ ಕಳುಹಿಸಿತ್ತು. 

ಉದಯಪುರ ಪಟ್ಟಣವು ನಿನ್ನೆ ಆಘಾತಕಾರಿ ಘಟನೆಗೆ ಸಾಕ್ಷಿಯಾಗಿದ್ದು, ಆರೋಪಿಗಳಲ್ಲಿ ಒಬ್ಬನಾದ ರಿಯಾಜ್ ಅಖ್ತರಿ, ತೆಲಿ ಅವರ ಕತ್ತು ಸೀಳಿದ್ದನು. ಮತ್ತೊಬ್ಬ ಆರೋಪಿ ಘೌಸ್ ಮೊಹಮ್ಮದ್ ಮೊಬೈಲ್ ಫೋನ್‌ನಲ್ಲಿ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ವೀಡಿಯೊ ಕ್ಲಿಪ್‌ನಲ್ಲಿ, ಆಕ್ರಮಣಕಾರರಲ್ಲಿ ಒಬ್ಬ ಆ ವ್ಯಕ್ತಿಯನ್ನು ತಲೆ ಕತ್ತರಿಸಿ ಎಂದು ಹೇಳಿಕೊಂಡಿದ್ದಾನೆ. ನಂತರ ಚಾಕು ತೋರಿಸಿ ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel