ದೇವೇಂದ್ರ ಫಡ್ನವೀಸ್ 
ದೇಶ

ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಆಡಳಿತ: 3ನೇ ಬಾರಿ ಸಿಎಂ ಆಗುವತ್ತ ದೇವೇಂದ್ರ ಫಡ್ನವೀಸ್: ಕೇಸರಿ ಪಾಳಯದಲ್ಲಿ ಸಂಭ್ರಮ

ಮಹಾ ವಿಕಾಸ್ ಅಘಾಡಿ ಸರ್ಕಾರ ಕೊನೆಗೂ ಪತನವಾಗುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಮುಂಬೈನಲ್ಲಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬಿಜೆಪಿ ಶಾಸಕರು ಸೇರಿದಂತೆ ಹಲವು ಪಕ್ಷದ ಮುಖಂಡರು ಪರಸ್ಪರ ಶುಭಾಶಯ ಕೋರಿದರು.

ಮುಂಬೈ: ಮಹಾ ವಿಕಾಸ್ ಅಘಾಡಿ ಸರ್ಕಾರ ಕೊನೆಗೂ ಪತನವಾಗುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಮುಂಬೈನಲ್ಲಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬಿಜೆಪಿ ಶಾಸಕರು ಸೇರಿದಂತೆ ಹಲವು ಪಕ್ಷದ ಮುಖಂಡರು ಪರಸ್ಪರ ಶುಭಾಶಯ ಕೋರಿದರು. ಅವರಲ್ಲಿ ಹಲವರು ಫಡ್ನವಿಸ್ ಶೀಘ್ರದಲ್ಲೇ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಎರಡು ವರ್ಷಗಳಿಂದ ದೇವೇಂದ್ರ ಫಡ್ನವೀಸ್ ಯಾವಾಗಲಾದರೂ ಸದನಕ್ಕೆ ಮರಳಿಯೇ ಮರಳುತ್ತೇನೆ ಎಂಜು ಹೇಳುತ್ತಿದ್ದಾರೆ. ಅವರು ಮತ್ತೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬರುತ್ತಾರೆ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಹೇಳಿದ್ದಾರೆ.  ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಕಾಂತ ಪಾಟೀಲ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಸಿಹಿ ತಿನ್ನಿಸಿದರು.

ಇಂದು ಮುಂಬೈನಲ್ಲಿ ಸಭೆ ಸೇರುವಂತೆ ಬಿಜೆಪಿ ತನ್ನ ಎಲ್ಲಾ ಶಾಸಕರನ್ನು ಕೇಳಿಕೊಂಡಿದೆ. ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಮುಂದಿನ ಕ್ರಮವನ್ನು ನಿರ್ಧರಿಸಲಿದ್ದಾರೆ ಎಂದು ಪಾಟೀಲ್ ಹೇಳಿದರು. 

ನಿನ್ನೆ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಗೋವಾದ ರೆಸಾರ್ಟ್‌ಗೆ ಆಗಮಿಸಿದ ಬಂಡಾಯ ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ಹಿನ್ನೆಲೆಯಲ್ಲಿ ತಮ್ಮ ಮುಂದಿನ ಕ್ರಮದ ಕುರಿತು ಚರ್ಚಿಸಲು ಅಲ್ಲಿ ಸಭೆ ನಡೆಸುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಸ್ಥಾನದಿಂದ ಠಾಕ್ರೆ ನಿರ್ಗಮಿಸಿದ ನಂತರ ಬಂಡಾಯ ಪಾಳಯದಲ್ಲಿರುವ ಎಲ್ಲರೂ ಸಂತೋಷವಾಗಿಲ್ಲ ಎಂದು ಭಿನ್ನಮತೀಯ ಶಾಸಕರೊಬ್ಬರು ಹೇಳಿದ್ದಾರೆ.

ನಿನ್ನೆ ಸಂಜೆ ಠಾಕ್ರೆ ಅವರು ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು,ರಾಜೀನಾಮೆ ಪತ್ರ ಅಂಗೀಕರಿಸಿದ ರಾಜ್ಯಪಾಲರು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಕೇಳಿಕೊಂಡಿದ್ದಾರೆ. 

ಬಿಜೆಪಿಯ ಕೇಂದ್ರ ನಾಯಕರು 'ಕರ್ಮ' ಶಬ್ದವನ್ನು ಬಳಸಿಕೊಂಡು ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ಪರಂಪರೆಯನ್ನು ಉದ್ಧವ್ ಠಾಕ್ರೆ ಮುರಿದಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿ ಟೀಕಿಸುತ್ತಿದ್ದಾರೆ. 

ಕರ್ಮ ಯಾರನ್ನೂ ಬಿಡುವುದಿಲ್ಲ ಎಂದು ರಾಜ್ಯದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ. “ಬಾಳಾಸಾಹೇಬರು ಅಧಿಕಾರದಲ್ಲಿ ಇಲ್ಲದಿದ್ದರೂ ಸರ್ಕಾರಗಳನ್ನು ನಿಯಂತ್ರಿಸಬಲ್ಲ ವ್ಯಕ್ತಿಯಾಗಿದ್ದರು. ಮತ್ತೊಂದೆಡೆ, ಅವರ ಮಗ ಅಧಿಕಾರದಲ್ಲಿದ್ದರೂ ತನ್ನ ಪಕ್ಷವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇಂದು ಸರ್ಕಾರ ಪತನವಾಗಿದೆ ಎಂದು ಬಿಜೆಪಿಯ ಐಟಿ ವಿಭಾಗ ಉಸ್ತುವಾರಿ ಅಮಿತ್ ಮಾಳವಿಯಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT