ದೇಶ

ಕ್ಲೈಮ್ಯಾಕ್ಸ್ ಘಟ್ಟಕ್ಕೆ 'ಮಹಾ' ರಾಜಕೀಯ: ಬಂಡಾಯ ನಾಯಕ ಏಕನಾಥ್ ಶಿಂಧೆ ಬಣ ಮುಂಬೈಗೆ ಆಗಮನ, ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರ ಭೇಟಿ

Nagaraja AB

ಮುಂಬೈ: ಮಹಾರಾಷ್ಟ್ರ ರಾಜಕೀಯ ಪ್ರಹಸನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ಬಂದು ನಿಂತಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಗೋವಾದಿಂದ ಮುಂಬೈಗೆ ಬಂದಿಳಿದಿದ್ದು, ಅವರು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಕೆಲವೇ ಕ್ಷಣಗಳಲ್ಲಿ ಭೇಟಿಯಾಗಲಿದ್ದಾರೆ.

ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರದ ರಚನೆಗೆ ತನ್ನ ಗುಂಪಿನ ಶಾಸಕರ ಬೆಂಬಲದ ಪತ್ರವನ್ನು ನೀಡಲಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಅಪರಾಹ್ನ 3-30ಕ್ಕೆ ರಾಜಭವನಕ್ಕೆ ತೆರಳಲಿರುವ ಏಕನಾಥ್ ಶಿಂಧೆ, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಶಾಸಕರ ಕೊರತೆಯಿಂದಾಗಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದರಿಂದ ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆ ವೇಳೆಯಲ್ಲಿ ಬಹುಮತ ಸಾಬೀತುಪಡಿಸುವ ವಿಶ್ವಾಸದಲ್ಲಿದೆ. ತದನಂತರ ಬಿಜೆಪಿಯ ದೇವೇಂದ್ರ ಫಡ್ನವೀಸ್ ಏಕನಾಥ್ ಶಿಂಧೆ ಬೆಂಬಲದೊಂದಿಗೆ ಮುಖ್ಯಸ್ಥಾನ ಸ್ಥಾನ ವಹಿಸಿಕೊಳ್ಳುವ ಸಾಧ್ಯತೆಯಿದೆ. 

ಖಾತೆ ಹಂಚಿಕೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಶೀಘ್ರದಲ್ಲಿಯೇ ಮಾತುಕತೆ ನಡೆಯಲಿದೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

SCROLL FOR NEXT