ಸಂಜಯ್ ರಾವತ್ 
ದೇಶ

ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ, ಅದು ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು: ಸಂಜಯ್ ರಾವತ್

ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ. ಇದು ಯಾವಾಗಲೂ ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು. ಮತ್ತೊಮ್ಮೆ ಸ್ವಂತ ಬಲದಿಂದ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

ಮುಂಬೈ: ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ. ಇದು ಯಾವಾಗಲೂ ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು. ಮತ್ತೊಮ್ಮೆ ಸ್ವಂತ ಬಲದಿಂದ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

ಉದ್ಧವ್ ಠಾಕ್ರೆ ರಾಜೀನಾಮೆಯೊಂದಿಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ(MVA) ಸರ್ಕಾರ ಪತನವಾಗಿದೆ. ನಿನ್ನೆ ಸಂಜೆ ರಾಜ್ಯಪಾಲ ಭಗಂತ್ ಸಿಂಗ್ ಕೊಶ್ಯಾರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವಾಗ ಭಾವುಕರಾಗಿದ್ದೆವು. ಮುಖ್ಯಮಂತ್ರಿಯಾಗಿ ಪ್ರತಿಯೊಬ್ಬರೂ ಉದ್ಧವ್ ಠಾಕ್ರೆ ಮೇಲೆ ನಂಬಿಕೆ ಇಟ್ಟುಕೊಂಡಿದ್ದರು. ರಾಜ್ಯದ ಪ್ರತಿ ಜಾತಿ, ಧರ್ಮದ ಜನರು ಅವರನ್ನು ಒಪ್ಪಿಕೊಂಡಿದ್ದರು. ಸೋನಿಯಾ ಗಾಂಧಿ ಮತ್ತು ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಮೇಲೆ ನಂಬಿಕೆ ಇಟ್ಟುಕೊಂಡಿದ್ದರು ಎಂದಿದ್ದಾರೆ.

ಇನ್ನು ತಮಗೆ ಇಡಿ ಸಮನ್ಸ್ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ರಾವತ್, ನಾಳೆ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗುತ್ತೇನೆ ಎಂದಿದ್ದಾರೆ. ಪತ್ರ ಚೌಲ್ ಭೂ ಹಗರಣ ಕೇಸಿಗೆ ಸಂಬಂಧಪಟ್ಟಂತೆ ಜುಲೈ 1ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಂಜಯ್ ರಾವತ್ ಗೆ ಜಾರಿ ನಿರ್ದೇಶನಾಲಯ ಎರಡು ಬಾರಿ ಸಮನ್ಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)

ರಾಯಲಸೀಮೆ ವಿಸ್ಮಯ; ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video