ಏಕನಾಥ್ ಶಿಂಧೆ 
ದೇಶ

ಸರ್ಕಾರ ರಚನೆಗೂ ಮುನ್ನವೇ ಬಂಡಾಯ ಶಾಸಕರು- ಬಿಜೆಪಿ ನಡುವೆ ಖಾತೆ ಹಂಚಿಕೆ ಕುರಿತು ಹಗ್ಗಜಗ್ಗಾಟ?: ಏಕನಾಥ್ ಶಿಂಧೆ ಸ್ಪಷ್ಟನೆ

ಶಿವಸೇನೆ ನಾಯಕ ಏಕನಾಥ್ ಶಿಂದೆ ನೇತೃತ್ವದಲ್ಲಿ ಶಾಸಕರು ಬಂಡಾಯವೆದ್ದ ನಂತರ ಉದ್ಘವವಾಗಿದ್ದ ಮಹಾರಾಷ್ಟ್ರ ರಾಜಕಾರಣದ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿರುವ ನಡುವಲ್ಲೇ ಸರ್ಕಾರ ರಚನೆಗೂ ಮುನ್ನವೇ ಬಂಡಾಯ ಶಾಸಕರು ಹಾಗೂ ಬಿಜೆಪಿ ನಡುವೆ ಖಾತೆ ಹಂಚಿಕೆ ಕುರಿತು ಹಗ್ಗಜಗ್ಗಾಟ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ.

ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂದೆ ನೇತೃತ್ವದಲ್ಲಿ ಶಾಸಕರು ಬಂಡಾಯವೆದ್ದ ನಂತರ ಉದ್ಘವವಾಗಿದ್ದ ಮಹಾರಾಷ್ಟ್ರ ರಾಜಕಾರಣದ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿರುವ ನಡುವಲ್ಲೇ ಸರ್ಕಾರ ರಚನೆಗೂ ಮುನ್ನವೇ ಬಂಡಾಯ ಶಾಸಕರು ಹಾಗೂ ಬಿಜೆಪಿ ನಡುವೆ ಖಾತೆ ಹಂಚಿಕೆ ಕುರಿತು ಹಗ್ಗಜಗ್ಗಾಟ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. 

ಅಧಿಕಾರ ಹಂಚಿಕೆ ಕುರಿತಂತೆ ಏಕನಾಥ್ ಶಿಂದೆ ಮತ್ತು ದೇವೇಂದ್ರ ಫಡ್ನವೀಸ್ ನಡುವೆ ಮಾತುಕತೆ ನಡೆದಿದ್ದು,. ಮುಂದಿನ ಕಾರ್ಯತಂತ್ರದ ಬಗ್ಗೆಯೂ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. 

ಹೊಸ ಸರ್ಕಾರ ರಚನೆಯಾಗುವವರೆಗೂ ಶಾಸಕರು ಒಟ್ಟಿಗೆ ಇರುವಂತೆ ನೋಡಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಏಕನಾಥ ಶಿಂಧೆ ಅವರಿಗೆ ಫಡ್ನವೀಸ್ ಅವರಿಗೆ ವಿನಂತಿಸಿದ್ದಾರೆನ್ನಲಾಗಿದೆ. 

ಈ ನಡುವೆ ಇಂದು ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಹೊಸ ಸರ್ಕಾರದ ರಚನೆ ಹಾಗೂ ಮಂತ್ರಿ ಮಂಡಲದ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. 

ದೇವೇಂದ್ರ ಫಡಣವೀಸ್ ಅವರು ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಏಕನಾಥ್ ಶಿಂಧೆ ಸ್ಪಷ್ಟನೆ
ಖಾತೆ ಹಂಚಿಕೆ ಕುರಿತು ಬಂಡಾಯ ಶಾಸಕರು ಹಾಗೂ ಬಿಜೆಪಿ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ ಎಂಬ ಊಹಾಪೋಹಗಳು ಶುರುವಾದ ಹಿನ್ನೆಲೆಯಲ್ಲಿ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆಯವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಯಾರಿಗೆ, ಎಷ್ಟು ಸಚಿವ ಸ್ಥಾನ ಎಂಬ ಬಗ್ಗೆ ಬಿಜೆಪಿ ಜತೆ ಯಾವುದೇ ಚರ್ಚೆ ನಡೆದಿಲ್ಲ, ಈ ಕುರಿತ ಚರ್ಚೆ ಸದ್ಯದಲ್ಲೇ ನಡೆಯಲಿದೆ. ಅಲ್ಲಿಯವರೆಗೂ ಸಚಿವರ ಪಟ್ಟಿ ಮತ್ತು ವದಂತಿಗಳನ್ನು ನಂಬಬೇಡಿ ಎಂದು ಹೇಳಿದ್ದಾರೆ. 

ಇದೇ ವೇಳೆ ನಾನೊಬ್ಬನೇ ಇಂದು ಮುಂಬೈಗೆ ತೆರಳುತ್ತಿರುವುದಾಗಿ ತಿಳಿಸಿದ ಅವರು, ಉಳಿದ ಶಾಸಕರೆಲ್ಲರೂ ಗೋವಾದಲ್ಲಿಯೇ ಉಳಿದುಕೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ